2 ಸಮುಯೇಲ 13:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಎಲ್ಲರೂ ಹೋದ ಮೇಲೆ ಅವನು ತಾಮಾರಳಿಗೆ, “ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ; ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ” ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಆಹಾರವನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಎಲ್ಲರೂ ಹೋದಮೇಲೆ ಅವನು ತಾಮಾರಳಿಗೆ, “ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ, ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ!” ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಎಲ್ಲರೂ ಹೋದ ಮೇಲೆ ಅವನು ತಾಮಾರಳಿಗೆ - ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ; ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡುಹೋಗಿ ಅವನ ಮುಂದಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅಮ್ನೋನನು ತಾಮಾರಳಿಗೆ, “ರೊಟ್ಟಿಗಳನ್ನು ಒಳ ಕೋಣೆಗೆ ತೆಗೆದುಕೊಂಡು ಬಾ. ನಾನು ನಿನ್ನ ಕೈಗಳಿಂದಲೇ ತಿನ್ನುತ್ತೇನೆ” ಎಂದನು. ತಾಮಾರಳು ತನ್ನ ಸೋದರನಾದ ಅಮ್ನೋನನಿದ್ದ ಒಳಕೋಣೆಗೆ ಹೋದಳು. ಅವಳು ತಾನು ಮಾಡಿದ ರೊಟ್ಟಿಗಳನ್ನು ತಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಅಮ್ನೋನನು, “ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿಯೊಳಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿಯೊಳಗೆ ತನ್ನ ಸಹೋದರನಾದ ಅಮ್ಮೋನನ ಬಳಿಗೆ ತೆಗೆದುಕೊಂಡು ಬಂದಳು. ಅಧ್ಯಾಯವನ್ನು ನೋಡಿ |