Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಅವನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಆಕೆಯ ಮಾತನ್ನು ಕೇಳದೆ ಬಲಾತ್ಕಾರದಿಂದ ಆಕೆಯನ್ನು ಕೆಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೆ ಅವನು ಆಕೆಯ ಮಾತನ್ನು ಕೇಳದೆ ಬಲಾತ್ಕಾರದಿಂದ ಆಕೆಯನ್ನು ಕೆಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ಅವನು ಆಕೆಯ ಮಾತನ್ನು ಕೇಳದೆ ಬಲಾತ್ಕಾರದಿಂದ ಆಕೆಯನ್ನು ಕೆಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ತಾಮಾರಳ ಮಾತುಗಳನ್ನು ಅಮ್ನೋನನು ಕೇಳಲಿಲ್ಲ. ಅವನು ತಾಮಾರಳಿಗಿಂತ ಬಲಶಾಲಿಯಾಗಿದ್ದುದರಿಂದ ಅವಳ ಮೇಲೆ ಬಲಾತ್ಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಅವನು ಅವಳ ಮಾತನ್ನು ಕೇಳಲಿಲ್ಲ. ಅಮ್ನೋನನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಅವನು ಬಲಾತ್ಕಾರದಿಂದ ಅವಳ ಮೇಲೆ ಅತ್ಯಾಚಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:14
8 ತಿಳಿವುಗಳ ಹೋಲಿಕೆ  

ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ.


ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸ ಪಾನಮಾಡಿದ ಗೃಹಕ್ಕೆ ಹಿಂತಿರುಗಿ ಬಂದು ಎಸ್ತೇರಳು ಒರಗಿಕೊಳ್ಳುವ ಸುಖಾಸನದ ಮೇಲೆ ಹಾಮಾನನು ಬಿದ್ದುಕೊಂಡಿರುವುದನ್ನು ಕಂಡು, “ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಬೇಕೆಂದಿರುತ್ತಾನೋ?” ಅಂದನು. ಅರಸನ ಬಾಯಿಂದ ಈ ಮಾತು ಹೊರಬಂದ ಕೂಡಲೆ ಸೇವಕರು ಹಾಮಾನನ ಮುಖಕ್ಕೆ ಮುಸುಕು ಹಾಕಿ ಎಳೆದುಕೊಂಡು ಹೋದರು.


ಆ ಊರಿನ ಜನರು ನನ್ನನ್ನು ಕೊಲ್ಲಬೇಕೆಂದು ಅದೇ ರಾತ್ರಿ ನಾನು ಇಳಿದುಕೊಂಡಿದ್ದ ಮನೆಯನ್ನು ಸುತ್ತಿಕೊಂಡರು, ಮತ್ತು ನನ್ನ ಉಪಪತ್ನಿಯನ್ನು ಭಂಗಪಡಿಸಿದರು, ಆಕೆಯು ಸತ್ತುಹೋದಳು.


ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಬಾರದು; ಅವರು ಒಡ ಹುಟ್ಟಿದವರು ಇಲ್ಲವೇ ಪರಸ್ತ್ರೀಯಲ್ಲಿ ಹುಟ್ಟಿದವರಾದರೂ ನಿಮಗೆ ಅಕ್ಕತಂಗಿಯರಲ್ಲವೇ.


“ಅವರು, ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ಇದಾದ ಮೇಲೆ ಅವನಿಗೆ ಆಕೆಯ ಮೇಲೆ ದ್ವೇಷಹುಟ್ಟಿತು. ಅವಳ ಬಗ್ಗೆ ಇದ್ದ ಪ್ರೀತಿಗಿಂತ ಆಕೆಯ ಮೇಲಿನ ದ್ವೇಷವೇ ಹೆಚ್ಚಾಯಿತು.


ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು