Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ತಾಮಾರಳು ಕನ್ಯೆಯಾಗಿದ್ದರಿಂದ ಆಕೆಗೆ ಏನು ಮಾಡಲು ಸಾಧ್ಯವಿಲ್ಲವೆಂದು ಅಮ್ನೋನನು ತಿಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ಆಕೆ ಕನ್ಯೆ ಆಗಿದ್ದುದರಿಂದ ಆಕೆಗೆ ಏನು ಮಾಡುವುದೂ ಅಸಾಧ್ಯವೆಂದು ಅಮ್ನೋನನಿಗೆ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಆಕೆಯ ಮೇಲಣ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ಆಕೆಯು ಕನ್ಯೆಯಾಗಿದ್ದದರಿಂದ ಆಕೆಗೆ ಏನು ಮಾಡುವದೂ ಅಸಾಧ್ಯವೆಂದು ಅಮ್ನೋನನಿಗೆ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ತಾಮಾರಳನ್ನು ಮೋಹಿಸಿದನು. ತಾಮಾರಳು ಕನ್ಯೆಯಾಗಿದ್ದಳು. ಈ ಕಾರಣದಿಂದ ಅವನು ಆಕೆಗೆ ಏನು ಮಾಡಲೂ ಸಾಧ್ಯವಿರಲಿಲ್ಲ. ಅವಳ ಮೋಹದಲ್ಲಿಯೇ ಅಮ್ನೋನನು ಬಲಹೀನನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ಸಂಕಟಪಟ್ಟು ಅಸ್ವಸ್ಥನಾದನು. ಅವಳು ಕನ್ಯೆಯಾಗಿದ್ದಳು. ಆದ್ದರಿಂದ ಅವಳನ್ನು ಏನಾದರೂ ಮಾಡುವುದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:2
5 ತಿಳಿವುಗಳ ಹೋಲಿಕೆ  

ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.


ಯೆರೂಸಲೇಮಿನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ ಎಂಬುವುದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.


“ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.


ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಸುಂದರಿಯಾದ ಒಬ್ಬಳು ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು.


ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು