Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಕೆಯ ಸಹೋದರನಾದ ಅಬ್ಷಾಲೋಮನು ಆಕೆಯನ್ನು ಕಂಡು, “ನಿನ್ನ ಅಣ್ಣನಾದ ಅಮ್ನೋನನು ನಿನ್ನನ್ನು ಸಂಗಮಿಸಿದನೋ? ತಂಗಿ, ಈಗ ಸುಮ್ಮನಿರು. ಅವನು ನಿನ್ನ ಅಣ್ಣನಲ್ಲವೋ? ಈ ಸಂಗತಿಯನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ” ಎಂದು ಹೇಳಿದನು. ತಾಮಾರಳು ಒಂಟಿಯಾಗಿ ತನ್ನ ಅಣ್ಣನಾದ ಅಬ್ಷಾಲೋಮನ ಮನೆಯಲ್ಲೇ ವಾಸಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಕೆಯ ಸಹೋದರನಾದ ಅಬ್ಷಾಲೋಮನು ಆಕೆಯನ್ನು ಕಂಡು, “ನಿನ್ನ ಅಣ್ಣ ಅಮ್ನೋನನು ನಿನ್ನ ಮಾನಭಂಗ ಮಾಡಿದನೇ? ನನ್ನ ತಂಗೀ, ತಕ್ಷಣಕ್ಕೆ ಸುಮ್ಮನಿರು; ಅವನು ನಿನ್ನ ಅಣ್ಣನಲ್ಲವೇ? ಈ ವಿಷಯವನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ,” ಎಂದು ಹೇಳಿದನು. ತಾಮಾರಳು ಒಂಟಿಗಳಾಗಿ ತನ್ನ ಅಣ್ಣನಾದ ಅಬ್ಷಾಲೋಮನ ಮನೆಯಲ್ಲೇ ವಾಸಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಕೆಯ ಸಹೋದರನಾದ ಅಬ್ಷಾಲೋಮನು ಆಕೆಯನ್ನು ಕಂಡು - ನಿನ್ನ ಅಣ್ಣನಾದ ಅಮ್ನೋನನು ನಿನ್ನನ್ನು ಕೂಡಿದನೇನು? ನನ್ನ ತಂಗಿಯೇ, ಈಗ ಸುಮ್ಮನಿರು; ಅವನು ನಿನ್ನ ಅಣ್ಣನಲ್ಲವೋ? ಈ ಸಂಗತಿಯನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ ಎಂದು ಹೇಳಿದನು. ತಾಮಾರಳು ಒಂಟಿಗಳಾಗಿ ತನ್ನ ಅಣ್ಣನಾದ ಅಬ್ಷಾಲೋಮನ ಮನೆಯಲ್ಲೇ ವಾಸಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ತಾಮಾರಳ ಸೋದರನಾದ ಅಬ್ಷಾಲೋಮನು ತಾಮಾರಳಿಗೆ, “ನಿನ್ನ ಸೋದರನಾದ ಅಮ್ನೋನನು ನಿನ್ನನ್ನು ಕೆಡಿಸಿ ಬಿಟ್ಟನಲ್ಲವೇ? ಅಮ್ನೋನನು ನಿನ್ನ ಸೋದರ. ತಂಗಿಯೇ, ಈಗ ಸದ್ಯಕ್ಕೆ ಸುಮ್ಮನಿರು. ಇದರಿಂದ ನೀನು ಹೆಚ್ಚು ಗಲಿಬಿಲಿಯಾಗದಿರು” ಎಂದು ಹೇಳಿದನು. ತಾಮಾರಳು ಏನನ್ನೂ ಹೇಳಲಿಲ್ಲ. ಅವಳು ಅಬ್ಷಾಲೋಮನ ಮನೆಯಲ್ಲಿ ವಾಸಿಸಲು ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಅವಳ ಸಹೋದರ ಅಬ್ಷಾಲೋಮನು ಅವಳಿಗೆ, “ನಿನ್ನ ಸಹೋದರ ಅಮ್ನೋನನು ನಿನ್ನ ಮಾನಭಂಗ ಮಾಡಿದನೋ? ನನ್ನ ಸಹೋದರಿ, ಈಗ ಸುಮ್ಮನಿರು. ಅವನು ನಿನ್ನ ಸಹೋದರನು. ಈ ಕಾರ್ಯವನ್ನು ನಿನ್ನ ಮನಸ್ಸಿಗೆ ತೆಗೆದುಕೊಳ್ಳಬೇಡ,” ಎಂದನು. ಹಾಗೆಯೇ ತಾಮಾರಳು ತನ್ನ ಸಹೋದರ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿ ವಾಸಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:20
7 ತಿಳಿವುಗಳ ಹೋಲಿಕೆ  

ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.


ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ.


ಇವರೆಲ್ಲರು ಲೇಯಳ ಸಂತತಿಯವರು. ಆಕೆಯು ಯಾಕೋಬನಿಗೆ ಇವರನ್ನೂ, ದೀನಳೆಂಬ ಹೆಣ್ಣು ಮಗಳನ್ನೂ ಪದ್ದನ್ ಅರಾಮಿನಲ್ಲಿ ಪಡೆದಳು. ಆಕೆಯಿಂದ ಹುಟ್ಟಿದ ಗಂಡು ಹೆಣ್ಣು ಮಕ್ಕಳು ಮೂವತ್ತು ಮೂರು ಮಂದಿ.


ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.


ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.


ಅರಸನಾದ ದಾವೀದನು ಈ ಸಂಗತಿಯನ್ನು ಕೇಳಿ ಬಹಳವಾಗಿ ಕೋಪಗೊಂಡನು.


ಆದರೆ ಅರಸನು, “ಅಬ್ಷಾಲೋಮನು ತನ್ನ ಮನೆಗೆ ಹೋಗಲಿ, ಅವನು ನನ್ನ ಮುಖವನ್ನು ನೋಡಬಾರದು” ಎಂದು ಆಜ್ಞಾಪಿಸಿದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು