2 ಸಮುಯೇಲ 13:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅರಸನು ಅವನಿಗೆ, “ಮಗನೇ ಬೇಡ ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು” ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಹೋಗಲಿಲ್ಲ. ಅವನನ್ನು ಆಶೀರ್ವದಿಸಿದನು ಅಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅರಸನು, “ಮಗನೇ, ಬೇಡ; ನಾವೆಲ್ಲರೂ ಬಂದರೆ ನಿನಗೆ ಕಷ್ಟವಾಗುವುದು,” ಎನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಒಪ್ಪಲಿಲ್ಲ; ಅವನನ್ನು ಆಶೀರ್ವದಿಸಿದನು, ಅಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅರಸನು ಅವನಿಗೆ - ಮಗನೇ, ಬೇಡ; ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಒಪ್ಪಲಿಲ್ಲ, ಅವನನ್ನು ಆಶೀರ್ವದಿಸಿದನು, ಅಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ರಾಜನಾದ ದಾವೀದನು ಅಬ್ಷಾಲೋಮನಿಗೆ, “ಮಗನೇ, ನಾವೆಲ್ಲ ಬರುವುದಿಲ್ಲ. ಅದು ನಿನಗೆ ಬಹಳ ತೊಂದರೆಯಾಗುತ್ತದೆ” ಎಂದು ಹೇಳಿದನು. ಅಬ್ಷಾಲೋಮನು ಬೇಡಿಕೊಂಡರೂ ದಾವೀದನು ಹೋಗಲಿಲ್ಲ; ಆದರೆ ದಾವೀದನು ಅವನನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅದಕ್ಕೆ ಅರಸನು ಅಬ್ಷಾಲೋಮನಿಗೆ, “ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವುದಿಲ್ಲ,” ಎಂದನು. ಅವನು ರಾಜನನ್ನು ಬಲವಂತ ಮಾಡಿದನು. ಆದರೆ ಅರಸನು ಹೋಗಲು ಒಪ್ಪದೆ, ಅಬ್ಷಾಲೋಮನನ್ನು ಆಶೀರ್ವದಿಸಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |