Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಅಬ್ಷಾಲೋಮನು, “ನೀನು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ಕಳುಹಿಸು” ಅಂದನು. ಅದಕ್ಕೆ ಅರಸನು, “ಅವನೇಕೆ ನಿನ್ನ ಸಂಗಡ ಬರಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆಗ ಅಬ್ಷಾಲೋಮನು, “ನೀವು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ನನ್ನೊಡನೆ ಕಳುಹಿಸಿ,” ಎಂದನು. ಅದಕ್ಕೆ ಅರಸನು, “ಅವನೇಕೆ ನಿನ್ನ ಸಂಗಡ ಬರಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಅಬ್ಷಾಲೋಮನು - ನೀನು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ನಮ್ಮೊಡನೆ ಕಳುಹಿಸು ಅಂದನು. ಅದಕ್ಕೆ ಅರಸನು - ಅವನೇಕೆ ನಿನ್ನ ಸಂಗಡ ಬರಬೇಕು ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಬ್ಷಾಲೋಮನು, “ನೀನು ಬರಲು ಇಚ್ಛಿಸದಿದ್ದರೆ, ದಯವಿಟ್ಟು ನನ್ನ ಸೋದರನಾದ ಅಮ್ನೋನನನ್ನು ಕಳುಹಿಸು” ಎಂದು ಕೇಳಿದನು. ರಾಜನಾದ ದಾವೀದನು ಅಬ್ಷಾಲೋಮನಿಗೆ, “ನಿನ್ನ ಜೊತೆಯಲ್ಲಿ ಅವನೇಕೆ ಬರಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಅಬ್ಷಾಲೋಮನು, “ಹಾಗಾದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ,” ಎಂದನು. ಅರಸನು ಅವನಿಗೆ, “ಏಕೆ ಅವನು ನಿಮ್ಮ ಸಂಗಡ ಬರಬೇಕು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:26
8 ತಿಳಿವುಗಳ ಹೋಲಿಕೆ  

ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.


ಅವನು ಅಮಾಸನನ್ನು, “ಸಹೋದರನೇ ಕ್ಷೇಮವೋ” ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು,


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ರಹಸ್ಯ ಸಂಭಾಷಣೆಗೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ಕೊಂದದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಅರಸನು ಅವನಿಗೆ, “ಮಗನೇ ಬೇಡ ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು” ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಹೋಗಲಿಲ್ಲ. ಅವನನ್ನು ಆಶೀರ್ವದಿಸಿದನು ಅಷ್ಟೇ.


ಆದರೆ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನು ಕಳುಹಿಸಿದನು.


ಶತ್ರುವು ಸ್ನೇಹಭಾವದಿಂದ ನಟಿಸುತ್ತಾನೆ, ಅಂತರಂಗದಲ್ಲಿ ಬರೀ ಮೋಸವನ್ನು ಇಟ್ಟುಕೊಂಡಿದ್ದಾನೆ.


ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು