2 ಸಮುಯೇಲ 13:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದಕೂಡಲೆ ಅವನನ್ನು ಹೊಡೆದು ಕೊಂದುಹಾಕಿ; ಹೆದರಬೇಡಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೆ? ಧೈರ್ಯದಿಂದಿರಿ, ಶೂರರಾಗಿರಿ,” ಎಂದು ಹೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ - ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ; ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೋ? ಧೈರ್ಯದಿಂದಿರಿ, ಶೂರರಾಗಿರಿ ಎಂದು ಹೇಳಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |