2 ಸಮುಯೇಲ 13:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗ ಹಾಗು ಬಹು ಯುಕ್ತಿವಂತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಮ್ನೋನನಿಗೆ ಶಿಮ್ಮನ ಮಗನಾದ ಯೋನಾದಾಬನೆಂಬ ಹೆಸರಿನ ಗೆಳೆಯನಿದ್ದನು. (ಶಿಮ್ಮನು ದಾವೀದನ ಸೋದರ.) ಯೋನಾದಾಬನು ಬಹಳ ಯುಕ್ತಿಯುಳ್ಳ ಮನುಷ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮೆಯನ ಮಗ ಯೊನಾದಾಬನೆಂಬ ಹೆಸರುಳ್ಳ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಬಹು ಕುಯುಕ್ತಿಯುಳ್ಳವನಾಗಿದ್ದನು. ಅಧ್ಯಾಯವನ್ನು ನೋಡಿ |
ಅನಂತರ ಸಮುವೇಲನು ಇಷಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ” ಎಂದು ಕೇಳಲು ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆದುಕೊಂಡು ಬರಲು ತಿಳಿಸು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು” ಎಂದು ಹೇಳಲು ಇಷಯನು ಅವನನ್ನು ಕರೆದು ಕರೆದುಕೊಂಡು ಬರಲು ತಿಳಿಸಿದನು.