2 ಸಮುಯೇಲ 13:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, “ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಲು ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವನು ಒಂದು ದಿನ ಅಮ್ನೋನನನ್ನು, “ರಾಜಪುತ್ರರೇ, ನೀವು ದಿನೇದಿನೇ ಕ್ಷೀಣವಾಗುತ್ತಾ ಬರುವುದೇಕೆ? ನನಗೆ ತಿಳಿಸಬಾರದೇ?,” ಎಂದು ಕೇಳಿದನು. ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹವುಂಟಾಗಿದೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಬಹು ಯುಕ್ತಿವಂತನಾದ ಇವನು ಒಂದು ದಿವಸ ಅಮ್ನೋನನನ್ನು - ರಾಜಪುತ್ರನೇ, ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವದೇಕೆ? ನನಗೆ ತಿಳಿಸುವದಿಲ್ಲವೋ ಎಂದು ಕೇಳಲು ಅವನು - ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹವುಂಟಾಗಿದೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೋನಾದಾಬನು ಅಮ್ನೋನನಿಗೆ, “ದಿನದಿಂದ ದಿನಕ್ಕೆ ನೀನು ತೆಳ್ಳಗಾಗುತ್ತಲೇ ಇರುವೆ. ನೀನು ರಾಜನ ಮಗ, ನಿನ್ನ ಬಳಿ ತಿನ್ನಲು ಬಹಳ ಇದ್ದರೂ ನೀನು ತೆಳ್ಳಗಾಗುತ್ತಿರುವುದು ಏಕೆ? ನನಗೆ ತಿಳಿಸು” ಎಂದು ಕೇಳಿದನು. ಅಮ್ನೋನನು ಯೋನಾದಾಬನಿಗೆ, “ನಾನು ತಾಮಾರಳನ್ನು ಮೋಹಿಸಿದ್ದೇನೆ. ಆದರೆ ಅವಳು ನನ್ನ ಸೋದರನಾದ ಅಬ್ಷಾಲೋಮನ ತಂಗಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೋನಾದಾಬನು ಅಮ್ನೋನನಿಗೆ, “ಅರಸನ ಮಗನಾದ ನೀನು ದಿನದಿನಕ್ಕೆ ಏಕೆ ಕ್ಷೀಣವಾಗಿ ಹೋಗುತ್ತೀ? ನನಗೆ ತಿಳಿಸುವುದಿಲ್ಲವೋ?” ಎಂದನು. ಅದಕ್ಕೆ ಅಮ್ನೋನನು ಅವನಿಗೆ, “ನಾನು ನನ್ನ ಸಹೋದರನಾಗಿರುವ ಅಬ್ಷಾಲೋಮನ ಸಹೋದರಿ ತಾಮಾರಳನ್ನು ಪ್ರೀತಿಮಾಡುತ್ತಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |