2 ಸಮುಯೇಲ 13:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಮ್ನೋನನು ಅಸ್ವಸ್ಥನಾದವನಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು. ಆಕೆ ನನಗೋಸ್ಕರ ನನ್ನ ಕಣ್ಣ ಮುಂದೆಯೇ ಆಹಾರವನ್ನು ಸಿದ್ಧಮಾಡಿಕೊಡುವುದಾದರೆ ಊಟಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅಮ್ನೋನನು ಅಸ್ವಸ್ಥನಾದವನೋ ಎಂಬಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿ ತಾಮಾರಳನ್ನು ನನ್ನ ಬಳಿಗೆ ಕಳುಹಿಸಿ; ಆಕೆ ನನ್ನ ಕಣ್ಮುಂದೆಯೇ ಒಂದೆರಡು ಭಕ್ಷ್ಯಗಳನ್ನು ಮಾಡಿಕೊಡುವುದಾದರೆ ಊಟಮಾಡುತ್ತೇನೆ,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಮ್ನೋನನು ಅಸ್ವಸ್ಥವಾದವನೋ ಎಂಬಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವದಕ್ಕೆ ಬಂದಾಗ ಅವನು ಅರಸನಿಗೆ - ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು; ಆಕೆ ನನ್ನ ಕಣ್ಣುಮುಂದೆಯೇ ಎರಡು ಭಕ್ಷ್ಯಗಳನ್ನು ಮಾಡಿಕೊಡುವದಾದರೆ ಊಟಮಾಡೇನು ಎಂದು ಬೇಡಿಕೊಳ್ಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಮ್ನೋನನು ಹಾಸಿಗೆಯಲ್ಲಿ ಮಲಗಿ ಕಾಯಿಲೆಯವನಂತೆ ನಟಿಸಿದನು. ಅವನನ್ನು ನೋಡಲು ರಾಜನಾದ ದಾವೀದನು ಅಲ್ಲಿಗೆ ಬಂದನು. ಅಮ್ನೋನನು ರಾಜನಾದ ದಾವೀದನಿಗೆ, “ದಯವಿಟ್ಟು ನನ್ನ ಸೋದರಿಯಾದ ತಾಮಾರಳನ್ನು ಒಳಕ್ಕೆ ಕರೆಯಿರಿ. ನಾನು ನೋಡುತ್ತಿರುವಂತೆ ಅವಳು ನನಗಾಗಿ ಎರಡು ಸಿಹಿ ರೊಟ್ಟಿಗಳನ್ನು ತಯಾರಿಸಲಿ. ಅವಳ ಕೈಗಳಿಂದ ಮಾಡಿದ ರೊಟ್ಟಿಗಳನ್ನೇ ನಾನು ತಿನ್ನುತ್ತೇನೆ” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಮ್ನೋನನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿಕೊಂಡನು. ಅರಸನು ತನ್ನನ್ನು ನೋಡುವುದಕ್ಕೆ ಬಂದಾಗ ಅಮ್ನೋನನು ಅರಸನಿಗೆ, “ನೀವು ನನ್ನ ಸಹೋದರಿ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣು ಮುಂದೆ ಎರಡು ಭಕ್ಷ್ಯಗಳನ್ನು ಮಾಡುವುದಕ್ಕೆ ಬರಲಿ,” ಎಂದನು. ಅಧ್ಯಾಯವನ್ನು ನೋಡಿ |