Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಿರಲಿ ಜನರು ನಿನ್ನ ಸೇವಕಿಯಾದ ನನ್ನನ್ನು ಹೆದರಿಸಿದ್ದರಿಂದ, ‘ನಾನು ಈ ಸಂಗತಿಯನ್ನು ಅರಸನಿಗೆ ತಿಳಿಸಿದರೆ, ತನ್ನ ಸೇವಕಿಯ ಬಿನ್ನಹವನ್ನು ಲಾಲಿಸಬಹುದು ಎಂದುಕೊಂಡು ನನ್ನ ಒಡೆಯನಾದ ಅರಸನಿಗೆ ಇದನ್ನು ತಿಳಿಸುವುದಕ್ಕೆ ಬಂದೆನು ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಿರಲಿ, ತಮ್ಮ ಸೇವಕಿ ಆದ ನನ್ನನ್ನು ಜನರು ಹೆದರಿಸಿದ್ದರಿಂದ ನಾನು ಈ ಸಂಗತಿಯನ್ನು ಅರಸರಿಗೆ ತಿಳಿಸಿದರೆ ಅವರು ತಮ್ಮ ಸೇವಕಿಯ ಬಿನ್ನಹವನ್ನು ಆಲಿಸಾರು ಎಂದುಕೊಂಡು ನನ್ನ ಒಡೆಯರಾದ ಅರಸರಿಗೆ ಇದನ್ನು ತಿಳಿಸುವುದಕ್ಕೆ ಬಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಿರಲಿ, ಜನರು ನಿನ್ನ ಸೇವಕಿಯಾದ ನನ್ನನ್ನು ಹೆದರಿಸಿದ್ದರಿಂದ ನಾನು ಈ ಸಂಗತಿಯನ್ನು ಅರಸನಿಗೆ ತಿಳಿಸಿದರೆ ಅವನು ತನ್ನ ಸೇವಕಿಯ ಬಿನ್ನಹವನ್ನು ಲಾಲಿಸಾನು ಎಂದುಕೊಂಡು ನನ್ನ ಒಡೆಯನಾದ ಅರಸನಿಗೆ ಇದನ್ನು ತಿಳಿಸುವದಕ್ಕೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರಾಜನಾದ ನನ್ನ ಒಡೆಯನೇ, ನಾನು ಈ ಮಾತುಗಳನ್ನು ನಿನಗೆ ಹೇಳುವುದಕ್ಕೆಂದೇ ಬಂದೆನು. ಏಕೆಂದರೆ ಜನರು ನನ್ನನ್ನು ಹೆದರಿಸಿದರು. ನಾನು ನನ್ನೊಳಗೆ ಹೀಗೆಂದುಕೊಂಡೆನು. ‘ನಾನು ರಾಜನೊಂದಿಗೆ ಮಾತಾಡುತ್ತೇನೆ. ಬಹುಶಃ ರಾಜನು ನನ್ನ ಮಾತುಗಳನ್ನು ಕೇಳಿ ಸಹಾಯ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಆದ್ದರಿಂದ ಈಗ ಜನರು ನನ್ನನ್ನು ಭಯಪಡಿಸಿದ್ದರಿಂದ, ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತಾನಾಡುವುದಕ್ಕೆ ಬಂದೆನು. ‘ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ. ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:15
3 ತಿಳಿವುಗಳ ಹೋಲಿಕೆ  

ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.


ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ, ನನ್ನ ಮಗನನ್ನೂ ದೇವರ ಸ್ವತ್ತಿನಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.’


ವಿಪತ್ತು ಆಕಸ್ಮಾತ್ತಾಗಿ ಜನರನ್ನು ಸಂಹರಿಸಲು, ನಿರ್ಮಲಚಿತ್ತರು ಮನಗುಂದುವುದನ್ನು ಆತನು ನೋಡಿ ಹಾಸ್ಯಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು