Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಬ್ಷಾಲೋಮನು ನಡೆದಿರುವ ಘಟನೆಯಿಂದ ಅರಸನು ಕೋಪಗೊಳ್ಳದೆ ಇರುವಂತೆ ವಿಷಯವನ್ನು ಈ ರೀತಿ ಹೇಳುವಂತೆ ನಿನ್ನ ಸೇವಕನಾದ ಯೋವಾಬನೇ ಇದನ್ನು ಕಲಿಸಿದನು. ಆದರೆ ನನ್ನ ಒಡೆಯನು ದೇವದೂತನಂಥ ಜ್ಞಾನಿ. ಅವನು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವನು” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಬ್ಷಾಲೋಮನ ವಿಷಯವನ್ನು ರೂಪಾಂತರ ಪಡಿಸುವುದಕ್ಕಾಗಿ ನಿಮ್ಮ ಸೇವಕನಾದ ಯೋವಾಬನೇ ಇದನ್ನು ಮಾಡಿದನು. ನನ್ನ ಒಡೆಯರು ದೇವದೂತನಂಥ ಜ್ಞಾನಿ; ಅವರು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುತ್ತಾರೆ!” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಬ್ಷಾಲೋಮನ ವಿಷಯವನ್ನು ರೂಪಾಂತರಪಡಿಸುವದಕ್ಕೋಸ್ಕರ ನಿನ್ನ ಸೇವಕನಾದ ಯೋವಾಬನೇ ಇದನ್ನು ಮಾಡಿದನು. ನನ್ನ ಒಡೆಯನು ದೇವದೂತನಂಥ ಜ್ಞಾನಿಯು; ಅವನು ಭೂಲೋಕದಲ್ಲಿ ನಡೆಯುವದನ್ನೆಲ್ಲಾ ತಿಳುಕೊಳ್ಳುವನು ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈ ವಿಷಯಗಳ ಬಗ್ಗೆ ನಿಮ್ಮ ದೃಷ್ಟಿಯು ಬದಲಾಗಲೆಂಬುದಕ್ಕಾಗಿ ಯೋವಾಬನು ಹೀಗೆ ಮಾಡಿದನು. ನನ್ನ ಒಡೆಯನೇ, ನೀನು ದೇವದೂತನಂತೆ ಬುದ್ಧಿವಂತನಾಗಿರುವೆ. ಈ ಲೋಕದಲ್ಲಿ ನಡೆಯುತ್ತಿರುವುದೆಲ್ಲವನ್ನೂ ನೀನು ತಿಳಿದಿರುವೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈ ಮಾತನ್ನು ರೂಪಕವಾಗಿ ತಿರುಗಿಸುವುದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿಯಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ದೇವದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:20
12 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿದ್ದಾನೆ. ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ” ಎಂದಳು.


ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ.


ನೆರೆಯವನೊಂದಿಗೆ ವಂಚನೆಯ ಸವಿನುಡಿಗಳನ್ನು ಆಡುವವನು, ಅವನ ಹೆಜ್ಜೆಗೆ ಬಲೆಯನ್ನೊಡ್ಡುವನು.


ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ದ್ವೇಷಿಸುವನು, ಕಪಟದ ಬಾಯಿ ನಾಶಕರ.


ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ, “ನೀನು ನೇರವಾಗಿ ಹೋಗಿ ಅವರನ್ನು ಮುತ್ತಿಗೆ ಹಾಕಬೇಡ. ಅವರಿಗೆ ತಿಳಿಯದಂತೆ ಸುತ್ತಿಕೊಂಡು ಹೋಗಿ ಹಿಂಬಾಲಿಸಿ, ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.


ಆಗ ಆಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತದೆ, ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುತ್ತೀ. ಆದರೆ ಫಿಲಿಷ್ಟಿಯ ಪ್ರಭುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರಲ್ಲಾ.


ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ತಿಳಿಯದೆ ಇರುವುದಿಲ್ಲ. ಆಗ ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ” ಎಂದು ಉತ್ತರ ಕೊಟ್ಟನು.


ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು