2 ಸಮುಯೇಲ 14:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ ಅರಸನನ್ನು ಹರಸಿ, “ಅರಸರೇ, ನನ್ನ ಒಡೆಯರೇ, ನೀವು ನಿಮ್ಮ ಸೇವಕನಾದ ನನ್ನ ಬಿನ್ನಹವನ್ನು ಆಲಿಸಿದ್ದರಿಂದ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂದು ಈಗ ಗೊತ್ತಾಯಿಸು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ ಅರಸನನ್ನು ಹರಸಿ - ಅರಸನೇ, ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂದು ಈಗ ಗೊತ್ತಾಯಿತು ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೋವಾಬನು ಅರಸನಾದ ದಾವೀದನಿಗೆ ಸಾಷ್ಟಾಂಗನಮಸ್ಕಾರಮಾಡಿ, “ನಾನು ಕೇಳಿಕೊಂಡದ್ದನ್ನು ನೀನು ನೆರವೇರಿಸಿದ್ದರಿಂದ, ನೀನು ನನ್ನ ವಿಷಯದಲ್ಲಿ ಸಂತೋಷದಿಂದಿರುವೆ ಎಂಬುದು ಇಂದು ನನಗೆ ಗೊತ್ತಾಯಿತು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ಯೋವಾಬನು ಮೋರೆ ಕೆಳಗಾಗಿ ನೆಲದ ಮೇಲೆ ಬಿದ್ದು ವಂದಿಸಿದನು. ಯೋವಾಬನು, “ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ, ನನ್ನ ಒಡೆಯನಾದ ಅರಸನೇ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂಬುದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು,” ಎಂದನು. ಅಧ್ಯಾಯವನ್ನು ನೋಡಿ |