Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು, “ಅರಸನೇ ರಕ್ಷಿಸು” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತೆಕೋವದ ಆ ಸ್ತ್ರೀ ಅರಸನ ಹತ್ತಿರಕ್ಕೆ ಹೋಗಿ ಅವನ ಮುಂದೆ ನೆಲಕ್ಕೆಬಿದ್ದು, “ಅರಸರೇ, ರಕ್ಷಿಸಿರಿ,” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು - ಅರಸೇ, ರಕ್ಷಿಸು ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ತೆಕೋವದ ಆ ಸ್ತ್ರೀಯು ರಾಜನ ಬಳಿಗೆ ಬಂದಾಗ ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ರಾಜನೇ, ನನಗೆ ಸಹಾಯಮಾಡು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಾಗೆಯೇ ತೆಕೋವದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿದಳು. ಮೋರೆ ಕೆಳಗಾಗಿ ನೆಲಕ್ಕೆ ಬಿದ್ದು ವಂದಿಸಿ, “ಅರಸನೇ, ಸಹಾಯಮಾಡು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:4
9 ತಿಳಿವುಗಳ ಹೋಲಿಕೆ  

ಮೂರನೆಯ ದಿನದಲ್ಲಿ ಸೌಲನ ಠಾಣ್ಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.


ಅಬೀಗೈಲಳು ದಾವೀದನನ್ನು ಕಂಡ ಕೂಡಲೇ ಕತ್ತೆಯಿಂದಿಳಿದು, ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು.


ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.


ಅರಸನು, “ನಿನಗೇನಾಯಿತು?” ಎಂದು ಆಕೆಯನ್ನು ಕೇಳಲು ಆಕೆಯು,


ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು.


ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು