Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈಗ ನೋಡಿ, ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿದ್ದಾರೆ; ‘ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ,’ ಎನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈಗ ನೋಡು, ಸಂಬಂಧಿಕರೆಲ್ಲಾ ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು - ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಣಿಂದ ಅಳಿಸಬೇಕೆಂದಿದ್ದಾರೆ ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಗ ನಮ್ಮ ಕುಟುಂಬದವರೆಲ್ಲಾ ನನಗೆ ವಿರುದ್ಧವಾಗಿದ್ದಾರೆ. ಅವರು ನನಗೆ, ‘ತನ್ನ ಸೋದರನನ್ನೇ ಕೊಂದ ಮಗನನ್ನು ಕರೆದುಕೊಂಡು ಬಾ. ಅವನು ತನ್ನ ಸೋದರನನ್ನೇ ಕೊಂದುಹಾಕಿದ್ದರಿಂದ ಅವನನ್ನು ನಾವು ಕೊಂದುಹಾಕುತ್ತೇವೆ’ ಎಂದು ಹೇಳಿದರು. ನನ್ನ ಮಗನನ್ನು ಕೊಲ್ಲಲು ನಾನು ಅವರಿಗೆ ಬಿಟ್ಟುಕೊಟ್ಟರೆ, ತನ್ನ ತಂದೆಯ ಆಸ್ತಿಗೆ ವಾರಸುದಾರನಾದ ಮಗನನ್ನೇ ಕೊಂದುಹಾಕಿದಂತಾಗುತ್ತದೆ. ನನ್ನ ಮಗ ನನ್ನ ಬದುಕಿನ ಕೊನೆಯ ಆಶಾಕಿರಣ. ಆ ಕೊನೆಯ ಆಶಾಕಿರಣವು ಸುಟ್ಟು ನಾಶವಾಗಿಬಿಡುತ್ತದೆ. ನಂತರ ನನ್ನ ಸತ್ತ ಗಂಡನ ಆಸ್ತಿ ಬೇರೊಬ್ಬನಿಗೆ ಹೋಗುತ್ತದೆ ಮತ್ತು ಅವನ ಹೆಸರು ದೇಶದೊಳಗಿಂದ ತೆಗೆದುಹಾಕಲ್ಪಡುತ್ತದೆ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದ್ದರಿಂದ ಕುಟುಂಬದವರೆಲ್ಲರು ನಿನ್ನ ಸೇವಕಿಯ ವಿರೋಧವಾಗಿ ಎದ್ದು, ‘ತನ್ನ ಸಹೋದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ಅವನನ್ನು ಒಪ್ಪಿಸಿಕೊಡು, ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಎನ್ನುತ್ತಾರೆ. ಹೀಗೆಯೇ ಅವರು ನನಗೆ ಉಳಿದಿರುವ ಒಂದು ಕೆಂಡವನ್ನು ಆರಿಸಿ, ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಅಳಿಸಬೇಕೆಂದಿದ್ದಾರೆ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:7
9 ತಿಳಿವುಗಳ ಹೋಲಿಕೆ  

ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.


ಆದರೆ ಆ ತೋಟಗಾರರು ಅವನ ಮಗನನ್ನು ಕಂಡು, ‘ಇವನೇ ಉತ್ತರಾಧಿಕಾರಿ, ಬನ್ನಿ ಇವನನ್ನು ಕೊಂದು ಹಾಕೋಣ, ಇವನ ಸ್ವತ್ತನ್ನು ನಾವೇ ತೆಗೆದುಕೊಳ್ಳೋಣ’ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು


ಅವನ ಮನೆಯ ಹಿರಿಯ ಸೇವಕರು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೇ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.


ಅವಳಲ್ಲಿ ಹುಟ್ಟುವ ಚೊಚ್ಚಲಮಗನು ಸತ್ತವನ ಮಗನೆಂದು ಎಣಿಸಲ್ಪಡಬೇಕು. ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರೊಳಗಿಂದ ಅಳಿಸಿ ಹೋಗುವುದಿಲ್ಲ.


ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು, ತನ್ನ ಕೋಪವನ್ನು ಮರೆತು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಯಿಸುವೆನು. ನಾನು ಒಂದೇ ದಿನದಲ್ಲಿ ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದು ಹೇಳಿದಳು.


ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.


“ನಾನು ವಿಧವೆ, ಗಂಡನು ಸತ್ತು ಹೋಗಿದ್ದಾನೆ. ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿನ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರು ಯಾರೂ ಇರಲಿಲ್ಲವಾದ್ದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.


ಆಗ ಅರಸನು, “ನೀನು ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು