Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲರ ಎಲ್ಲಾ ಕುಲದವರಿಗೆ, “ನೀವು ತುತ್ತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಅರ್ಭಟಿಸಿರಿ’” ಎಂದು ಹೇಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನು ಗೂಢಚಾರನನ್ನು ಕಳುಹಿಸಿ ಇಸ್ರಯೇಲರ ಎಲ್ಲಾ ಕುಲದವರಿಗೆ, “ನೀವು ತುತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾ‍ಲೋಮನು ಹೆಬ್ರೋನಿನಲ್ಲಿ ಅರಸ’ ಎಂದು ಘೋಷಿಸಿರಿ,” ಎಂದು ಹೇಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಗೂಢಚಾರರನ್ನು ಕಳುಹಿಸಿ ಇಸ್ರಾಯೇಲ್ಯರ ಎಲ್ಲಾ ಕುಲದವರಿಗೆ - ನೀವು ತುತೂರಿಯ ಧ್ವನಿಯನ್ನು ಕೇಳುತ್ತಲೆ ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಆರ್ಭಟಿಸಿರಿ ಎಂದು ಹೇಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಅಬ್ಷಾಲೋಮನು ಇಸ್ರೇಲಿನ ಎಲ್ಲಾ ಕುಲಗಳಿಗೂ ಗೂಢಚಾರರನ್ನು ಕಳುಹಿಸಿದನು. ಈ ಗೂಢಚಾರರು ಜನರಿಗೆ, “ನೀವು ಕಹಳೆಯ ಧ್ವನಿಯನ್ನು ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ರಾಜನಾದ’ನೆಂದು ಹೇಳಿ” ಎಂಬುದಾಗಿ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅಬ್ಷಾಲೋಮನು ಇಸ್ರಾಯೇಲಿನ ಸಮಸ್ತ ಗೋತ್ರಗಳಿಗೆ ಗೂಢಚಾರರನ್ನು ಕಳುಹಿಸಿ ಅವರಿಗೆ, “ನೀವು ತುತೂರಿಯ ಶಬ್ದ ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಘೋಷಿಸಿರಿ’ ಎಂದು ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:10
16 ತಿಳಿವುಗಳ ಹೋಲಿಕೆ  

ದಾವೀದನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡುವುದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲರು ದಾವೀದನಿಗೆ ರಾಜ್ಯಾಭಿಷೇಕಮಾಡುವುದರಲ್ಲಿ ಏಕಮನಸ್ಸುಳ್ಳವರಾಗಿದ್ದರು.


ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವುದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪುಗುಂಪುಗಳಾಗಿ ಬಂದ ಯುದ್ಧಸನ್ನದ್ಧರಾಗಿದ್ದವರ ಲೆಕ್ಕ;


ಆಗ ಅರಸನಾದ ದಾವೀದನು ತನ್ನ ಜೊತೆಯಲ್ಲಿ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನ ವಾಕ್ಯಾನುಸಾರವಾಗಿ ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.


ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು.


ಅಲ್ಲಿ ಯಾಜಕನಾದ ಚಾದೋಕನೂ ಮತ್ತು ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರೂ, ‘ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಜಯಘೋಷ ಮಾಡಲಿ.


ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತನಾಡಿಕೊಂಡರು.


ಆದುದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ಸಮೀಪದಲ್ಲಿಯೇ ಯೋವಾಬನ ಜವೆಗೋದಿಯ ಹೊಲವುಂಟಲ್ಲಾ, ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ” ಎಂದು ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.


ಅವನು ಹೆಬ್ರೋನಿನಲ್ಲಿದ್ದು ಯೆಹೂದ ಕುಲವೊಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು. ಯೆರೂಸಲೇಮಿನಲ್ಲಿದ್ದು ಯೆಹೂದ್ಯರನ್ನು ಮತ್ತು ಎಲ್ಲಾ ಇಸ್ರಾಯೇಲರನ್ನು ಆಳಿದ್ದು ಮೂವತ್ತು ಮೂರು ವರ್ಷಗಳು.


ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದದ್ದು ಏಳು ವರ್ಷ ಆರು ತಿಂಗಳುಗಳು.


ಅನಂತರ ದಾವೀದನು ಯೆಹೋವನನ್ನು, “ನಾನು ಯೆಹೂದ ದೇಶದ ಯಾವುದಾದರು ಒಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಲು ಆತನು ಹೋಗಬಹುದು ಅಂದನು. ಅವನು ತಿರುಗಿ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ ಹೆಬ್ರೋನಿಗೆ ಹೋಗು ಎಂದು ಉತ್ತರ ಸಿಕ್ಕಿತು.


ಆಗ ಅರಸನು, “ಹೋಗಿಬಾ, ನಿನಗೆ ಶುಭವಾಗಲಿ” ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟು ಹೋದನು.


ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ, “ಹಗ್ಗೀತಳ ಮಗನಾದ ಅದೋನೀಯನು ನಮ್ಮ ಒಡೆಯನಾದ ದಾವೀದನಿಗೆ ತಿಳಿಯದೇ ಅರಸನಾದನೆಂಬುದನ್ನು ನೀನು ಕೇಳಿದಿಯಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು