2 ಸಮುಯೇಲ 15:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಬ್ಷಾಲೋಮನು ಯೆರೂಸಲೇಮಿನಿಂದ ಆರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು. ಅವರಿಗೇನೂ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅಬ್ಷಾಲೋಮನು ಜೆರುಸಲೇಮಿನಿಂದ ಸಮಾರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥಮನಸ್ಸಿನಿಂದ ಹೋದವರು; ಒಳಸಂಚಿನ ಸುಳಿವೇನೂ ಅವರಿಗೆ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಬ್ಷಾಲೋಮನು ಯೆರೂಸಲೇವಿುನಿಂದ ಸಮಾರಾಧನೆಗೆಂದು ಇನ್ನೂರು ಜನರನ್ನು ಕರಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು; ಅವರಿಗೇನೂ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಬ್ಷಾಲೋಮನು ತನ್ನೊಂದಿಗೆ ಬರಲು ಇನ್ನೂರು ಜನರನ್ನು ಆಹ್ವಾನಿಸಿದನು. ಆ ಜನರು ಜೆರುಸಲೇಮನ್ನು ಬಿಟ್ಟು ಅವನೊಂದಿಗೆ ಹೊರಟರು. ಆದರೆ ಅವನು ಯೋಚಿಸಿದ ಕಾರ್ಯವು ಅವರಿಗೆ ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲಾದ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ಒಳಸಂಚನ್ನು ಏನೂ ತಿಳಿಯದೆ ಯಥಾರ್ಥ ಮನಸ್ಸುಳ್ಳವರಾಗಿದ್ದರು. ಅಧ್ಯಾಯವನ್ನು ನೋಡಿ |