Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, “ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ಷಾಲೋಮನ ಬಳಿಯಲ್ಲಿ ವಾಸಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಅರಸನು ಗಿತ್ತೀಯನಾದ ಇತ್ತೈ ಎಂಬವನಿಗೆ, “ನೀನು ನಮ್ಮ ಸಂಗಡ ಏಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ? ಹಿಂದಿರುಗಿ ಹೋಗಿ ಅರಸನ ಬಳಿಯಲ್ಲೇ ವಾಸಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಅರಸನು ಗಿತ್ತೀಯನಾದ ಇತ್ತೈ ಎಂಬವನಿಗೆ - ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನ ಬಳಿಯಲ್ಲಿ ವಾಸಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ರಾಜನು ಗತ್‌ನ ಇತ್ತೈಯನಿಗೆ, “ನೀನು ಸಹ ನಮ್ಮೊಂದಿಗೆ ಏಕೆ ಬರುತ್ತಿರುವೆ? ಹಿಂದಿರುಗಿಹೋಗಿ, ಹೊಸ ರಾಜನೊಂದಿಗೆ ನೆಲೆಸು. ನೀನು ಹೊರದೇಶೀಯನು. ಇದು ನಿನ್ನ ಸ್ವದೇಶವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ಕಂಡು, “ನೀನು ನಮ್ಮ ಸಂಗಡ ಬರುವುದು ಏಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ, ಅರಸನ ಸಂಗಡ ಇರು. ಏಕೆಂದರೆ ನೀನು ವಿದೇಶಿ. ನಿನ್ನ ದೇಶದಿಂದ ಸೆರೆಯಾಳಾಗಿ ಬಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:19
4 ತಿಳಿವುಗಳ ಹೋಲಿಕೆ  

ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನು ನಿಮ್ಮೊಂದಿಗೆ ಬರುತ್ತೇನೆ” ಎಂದು ಹೇಳಿದನು.


ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು. ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡು ಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು. ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಿರುಗಿ ಹೋಗು. ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ” ಎಂದು ಹೇಳಿದನು.


ನವೊಮಿಯು ರೂತಳಿಗೆ, ಇಗೋ, ನಿನ್ನ ಓರಗಿತ್ತಿಯು ತಿರುಗಿ ತನ್ನ ಜನರ ಬಳಿಗೂ, ತನ್ನ ಕುಲ ದೇವರುಗಳ ಬಳಿಗೂ ಹೋಗಿದ್ದಾಳೆ. ನೀನೂ ಆಕೆಯಂತೆ ನಿನ್ನ ಜನರ ಬಳಿಗೆ ಹೋಗು ಅಂದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು