Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ಇತ್ತೈ, “ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದಕ್ಕೆ ಇತ್ತೈ, “ಸರ್ವೇಶ್ವರನಾಣೆ, ನನ್ನ ಒಡೆಯರಾದ ಅರಸರ ಜೀವದಾಣೆ, ಪ್ರಾಣಹೋದರೂ ಉಳಿದರೂ ನನ್ನ ಒಡೆಯರಾದ ಅರಸರಿರುವಲ್ಲಿಗೇ ಹೋಗುವೆನು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದಕ್ಕೆ ಇತ್ತೈ - ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಜೀವಹೋದರೂ ಉಳಿದರೂ ನನ್ನ ಒಡೆಯನಾದ ಅರಸನಿರುವಲ್ಲಿಗೆ ಹೋಗುವೆನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅದಕ್ಕೆ ಇತ್ತೈಯನು ರಾಜನಿಗೆ, “ಯೆಹೋವನಾಣೆ ಮತ್ತು ನಿನ್ನಾಣೆ, ನಾನಂತೂ ನಿನ್ನೊಂದಿಗೆ ಇರುತ್ತೇನೆ. ನನಗೆ ಜೀವ ಹೋದರೂ ಉಳಿದರೂ ನಿನ್ನೊಂದಿಗೆ ಇರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ಇತ್ತೈಯೂ ಅರಸನಿಗೆ ಉತ್ತರವಾಗಿ, “ಯೆಹೋವ ದೇವರ ಜೀವದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ, ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ, ಸಾವಾದರೂ ಬದುಕಾದರೂ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:21
15 ತಿಳಿವುಗಳ ಹೋಲಿಕೆ  

ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.


ಆದರೂ ಹುಡುಗನ ತಾಯಿ, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು.


ನಿಮ್ಮ ಮೇಲೆ ತಪ್ಪುಹೊರಿಸಬೇಕೆಂದು ನಾನು ಇದನ್ನು ಹೇಳುತ್ತಿಲ್ಲ; ನಿಮ್ಮ ಜೊತೆ ಸಾಯುವುದಕ್ಕೂ, ಬದುಕುವುದಕ್ಕೂ ಎನ್ನುವಷ್ಟರ ಮಟ್ಟಿಗೆ ನೀವು ನಮ್ಮ ಹೃದಯದಲ್ಲಿದ್ದೀರೆಂದು ನಾನು ಮೊದಲೇ ಹೇಳಿದ್ದೆನಲ್ಲಾ.


ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.


ಎಲೀಯನು ತಿರುಗಿ ಅವನಿಗೆ, “ನೀನು ಇಲ್ಲೇ ಇರು. ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಅದಕ್ಕೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಅನಂತರ ಅವರಿಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು.


ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಯೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಎಲೀಷನು ಅವನ ಜೊತೆಯಲ್ಲಿ ಯೆರಿಕೋವಿಗೆ ಹೋದನು.


ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಬೇತೇಲಿಗೆ ಹೋಗಬೇಕೆಂದು” ಆಜ್ಞಾಪಿಸಿದ್ದಾನೆ ಎನ್ನಲು, ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರಕೊಟ್ಟನು. ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು.


ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.


ಅದಕ್ಕೆ ದಾವೀದನು, “ನಿನ್ನ ಕಣ್ಣುಮುಂದೆ ನನಗೆ ದಯೆ ದೊರಕುತ್ತದೆಂಬುದನ್ನು ನಿನ್ನ ತಂದೆಯು ಬಲ್ಲನು. ಆದ್ದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಅಂತರವಿದೆ” ಎಂದು ಖಂಡಿತವಾಗಿ ಹೇಳಿದನು.


ಆಗ ದಾವೀದನು ಅವನಿಗೆ, “ಒಳ್ಳೆಯದು, ಮುಂದೆ ನಡೆ” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೇವಕರನ್ನೂ, ಕುಟುಂಬದವರನ್ನೂ ಕರೆದುಕೊಂಡು ಮುಂದೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು