Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಪ್ಪಣೆಯಾಗಲಿ, ನಿನ್ನ ಸೇವಕನಾದ ನಾನು ಅರಾಮ್ ದೇಶದ ಗೆಷೂರಿನಲ್ಲಿದ್ದಾಗ ಯೆಹೋವನು ನನ್ನನ್ನು ತಿರುಗಿ ಯೆರೂಸಲೇಮಿಗೆ ಬರಮಾಡುವುದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೇನೆ” ಎಂದು ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿಮ್ಮ ಸೇವಕನಾದ ನಾನು ಸಿರಿಯಾದೇಶದ ಗೆಷೂರಿನಲ್ಲಿದ್ದಾಗ ಸರ್ವೇಶ್ವರ ನನ್ನನ್ನು ಮರಳಿ ಜೆರುಸಲೇಮಿಗೆ ಬರಮಾಡುವುದಾದರೆ ಅವರಿಗೆ ಒಂದು ವಿಶೇಷ ಆರಾಧನೆ ಮಾಡಿಸುವೆನೆಂದು ಹರಕೆ ಮಾಡಿದ್ದೆನು,” ಎಂದು ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ಸೇವಕನಾದ ನಾನು ಅರಾಮ್‍ದೇಶದ ಗೆಷೂರಿನಲ್ಲಿದ್ದಾಗ - ಯೆಹೋವನು ನನ್ನನ್ನು ತಿರಿಗಿ ಯೆರೂಸಲೇವಿುಗೆ ಬರಮಾಡುವದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೆನು ಎಂದು ವಿಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಅರಾಮಿನ ಗೆಷೂರಿನಲ್ಲಿ ನೆಲೆಸಿದ್ದಾಗ, ‘ಯೆಹೋವನು ನನ್ನನ್ನು ಜೆರುಸಲೇಮಿಗೆ ಮತ್ತೆ ಕರೆಸಿಕೊಂಡರೆ, ನಾನು ಯೆಹೋವನ ಆರಾಧನೆ ಮಾಡುತ್ತೇನೆ, ಎಂಬ ವಿಶೇಷ ಪ್ರಮಾಣವನ್ನು ಮಾಡಿದ್ದೆನು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ, ‘ಯೆಹೋವ ದೇವರು ನನ್ನನ್ನು ಯೆರೂಸಲೇಮಿಗೆ ತಿರುಗಿ ನಿಜವಾಗಿಯೂ ಬರಮಾಡಿದರೆ, ನಾನು ಯೆಹೋವ ದೇವರನ್ನು ಸೇವಿಸುವೆನು,’ ಎಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಹರಕೆ ಮಾಡಿಕೊಂಡಿದ್ದನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:8
14 ತಿಳಿವುಗಳ ಹೋಲಿಕೆ  

“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.


ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು, ‘ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆ ಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು’ ಎಂಬುದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.


ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.


ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.


ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.


ಅದಕ್ಕೆ ಅಬ್ಷಾಲೋಮನು ಅವನಿಗೆ, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ, ಅಲ್ಲೇ ಇದ್ದರೆ ಒಳ್ಳೆಯದಾಗುತ್ತಿತ್ತಲ್ಲವೋ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆನು. ನಾನು ಹೇಗೂ ಅರಸನ ದರ್ಶನ ಮಾಡಬೇಕು. ನಾನು ಅಪರಾಧಿಯಾಗಿದ್ದರೆ ನನ್ನನ್ನು ಕೊಲ್ಲಿಸಲಿ” ಎಂದನು.


ನಂತರ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.


ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ” ಎಂದನು. ಅದಕ್ಕೆ ಯೆಹೋವನು, “ನೀನು ಒಂದು ಕರುವನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವುದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕಾಗಿ ಕರೆ.


ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.


ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.


ಆಗ ಅರಸನು, “ಹೋಗಿಬಾ, ನಿನಗೆ ಶುಭವಾಗಲಿ” ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು