Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನನು ಹೀಗೆ ಮಾಡುವುದು ಯಾವ ದೊಡ್ಡ ಮಾತು? ಬಿಡಿರಿ, ಅವನು ಶಪಿಸಲಿ. ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ - ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವದು ಯಾವ ದೊಡ್ಡ ಮಾತು! ಬಿಡಿರಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದಾವೀದನು ಅಬೀಷೈಯನಿಗೂ, ತನ್ನ ಸಮಸ್ತ ಸೇವಕರಿಗೂ, “ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ, ಎಷ್ಟೋ ಅಧಿಕವಾಗಿ ಬೆನ್ಯಾಮೀನನಾದವನು ಈಗ ಏನು ಮಾಡಿಯಾನು? ಅವನನ್ನು ಬಿಟ್ಟುಬಿಡಿರಿ. ಅವನು ದೂಷಿಸಲಿ. ಏಕೆಂದರೆ ಯೆಹೋವ ದೇವರು ಅವನಿಗೆ ಹಾಗೆಯೇ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:11
14 ತಿಳಿವುಗಳ ಹೋಲಿಕೆ  

ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


“ಇದಲ್ಲದೆ, ನಾನೇ ಯೆಹೋವನು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ, ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆನು.


“ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.


ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.


ಅವನು ಒಂದು ದಿನ ದೇವಾಲಯಕ್ಕೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿದ್ದಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬುವವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನ ನಂತರ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.


ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು.


ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.


ಯೆಹೋವನ ವಾಕ್ಯವು ಅವನ ಸಂಗಡ ಮಾತನಾಡಿ, “ಈ ಮನುಷ್ಯನು ನಿನಗೆ ಬಾಧ್ಯಸ್ಥನಾಗುವುದಿಲ್ಲ; ಆದರೆ ನಿನ್ನ ಹೊಟ್ಟೆಯಲ್ಲಿ ಹುಟ್ಟುವವನೇ ನಿನಗೆ ಬಾಧ್ಯಸ್ಥನಾಗುವನು” ಎಂದು ಹೇಳಿ ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು,


ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.


ಅವರು ಶಪಿಸಲಿ, ಚಿಂತೆಯಿಲ್ಲ; ನೀನು ಆಶೀರ್ವದಿಸುವಿ. ಅವರು ಎದ್ದು ಅಪಮಾನ ಹೊಂದುವರು. ಆದರೆ ನಿನ್ನ ಸೇವಕನಾದ ನಾನು ಉಲ್ಲಾಸಿಸುವೆನು.


ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು