Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಸನು ಚೀಬನನ್ನು, “ಇವುಗಳನ್ನು ಯಾಕೆ ತಂದಿ?” ಎಂದು ಕೇಳಿದನು. ಅವನು, “ಅರಸನ ಮನೆಯವರು ಸವಾರಿಮಾಡುವುದಕ್ಕಾಗಿ ಕತ್ತೆಗಳನ್ನು, ಆಳುಗಳು ತಿನ್ನುವುದಕ್ಕಾಗಿ ಹಣ್ಣು ಮತ್ತು ರೊಟ್ಟಿಗಳನ್ನು, ಅರಣ್ಯದಲ್ಲಿ ದಣಿದವರು ಕುಡಿಯುವುದಕ್ಕಾಗಿ ದ್ರಾಕ್ಷಾರಸವನ್ನು ತಂದಿದ್ದೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅರಸನು ಚೀಬನನ್ನು ನೋಡಿ, “ಇವುಗಳನ್ನು ಏಕೆ ತಂದೆ?” ಎಂದು ಕೇಳಿದನು. ಅವನು, “ಕತ್ತೆಗಳನ್ನು ಅರಸರ ಮನೆಯವರು ಸವಾರಿಮಾಡಲೆಂದು, ಹಣ್ಣು ರೊಟ್ಟಿಗಳನ್ನು ಆಳುಗಳು ತಿನ್ನಲೆಂದೂ ಹಾಗು ದ್ರಾಕ್ಷಾರಸವನ್ನು ಅರಣ್ಯದಲ್ಲಿ ದಣಿದವರು ಕುಡಿಯಲೆಂದು ತಂದಿದ್ದೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅರಸನು ಚೀಬನನ್ನು - ಇವುಗಳನ್ನು ಯಾಕೆ ತಂದಿ ಎಂದು ಕೇಳಲು ಅವನು - ಕತ್ತೆಗಳನ್ನು ಅರಸನ ಮನೆಯವರು ಸವಾರಿಮಾಡುವದಕ್ಕಾಗಿಯೂ ಹಣ್ಣು ರೊಟ್ಟಿಗಳನ್ನು ಆಳುಗಳು ತಿನ್ನುವದಕ್ಕಾಗಿಯೂ ದ್ರಾಕ್ಷಾರಸವನ್ನು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕಾಗಿಯೂ ತಂದಿದ್ದೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ರಾಜನಾದ ದಾವೀದನು ಚೀಬನಿಗೆ, “ಈ ವಸ್ತುಗಳೆಲ್ಲ ಏತಕ್ಕಾಗಿ?” ಎಂದು ಕೇಳಿದನು. ಚೀಬನು, “ಹೇಸರಕತ್ತೆಗಳನ್ನು ರಾಜನ ಕುಟುಂಬದವರು ಸವಾರಿ ಮಾಡುವುದಕ್ಕಾಗಿಯೂ ರೊಟ್ಟಿಗಳನ್ನು ಮತ್ತು ಹಣ್ಣುಗಳನ್ನು ಸೇವಕರು ತಿನ್ನುವುದಕ್ಕಾಗಿಯೂ ತಂದಿದ್ದೇನೆ. ಅರಣ್ಯದಲ್ಲಿ ಶಕ್ತಿಗುಂದಿಹೋದವನು ದ್ರಾಕ್ಷಾರಸವನ್ನು ಕುಡಿಯಲಿ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅರಸನು ಚೀಬನಿಗೆ, “ಇವು ಏಕೆ,” ಎಂದನು. ಅದಕ್ಕೆ ಚೀಬನು, “ಕತ್ತೆಗಳನ್ನು ಅರಸನ ಮನೆಯವರು ಸವಾರಿಮಾಡುವುದಕ್ಕೆ, ಆ ರೊಟ್ಟಿಗಳೂ, ಬೇಸಿಗೆ ಕಾಲದ ಫಲಗಳೂ ಜನರಿಗೆ ತಿನ್ನುವುದಕ್ಕೆ, ದ್ರಾಕ್ಷಾರಸವು ಮರುಭೂಮಿಯಲ್ಲಿ ದಣಿದವರು ಕುಡಿಯುವುದಕ್ಕೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:2
13 ತಿಳಿವುಗಳ ಹೋಲಿಕೆ  

ಬೆಣ್ಣೆ, ಕುರಿ ಹಸುವಿನ ಗಿಣ್ಣು ಇವುಗಳನ್ನು ತಂದುಕೊಟ್ಟರು. ಜನರು ಅರಣ್ಯ ಪ್ರಯಾಣದಿಂದ ಹಸಿದವರೂ, ದಣಿದವರೂ ಮತ್ತು ಬಾಯಾರಿದವರೂ ಆಗಿದ್ದಾರೆ ಎಂದುಕೊಂಡು ಇವುಗಳನ್ನು ತಂದರು.


ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ, ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನ ವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.


“ಬಿಳೀ ಕತ್ತೆಗಳ ಮೇಲೆ ಸವಾರಿಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತುಕೊಳ್ಳುವವರೇ, ಕಾಲ್ನಡಿಗೆಯಲ್ಲಿ ಪ್ರಯಾಣಿಸುವವರೇ, ಗಾನಮಾಡಿರಿ.


“ನಿನ್ನ ಜನರು, ‘ಇದೇನು? ನಮಗೆ ತಿಳಿಸುವುದಿಲ್ಲವೋ’ ಎಂದು ನಿನ್ನನ್ನು ಕೇಳುವಾಗ ನೀನು ಅವರಿಗೆ,


ಅವನು, “ನನ್ನ ಒಡೆಯನೇ, ಅರಸನೇ, ನನ್ನ ಸೇವಕನು ನನ್ನನ್ನು ವಂಚಿಸಿದನು. ಕುಂಟನಾದ ನಾನು ಅವನಿಗೆ ‘ಕತ್ತೆಗೆ ತಡಿಹಾಕು. ನಾನು ಕುಳಿತುಕೊಂಡು ಅರಸನ ಜೊತೆಯಲ್ಲಿ ಹೋಗಬೇಕು’ ಎಂದು ಆಜ್ಞಾಪಿಸಿದೆನು.


ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಮುತ್ತಲಿನ ಜನರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯ ಮಾರ್ಗವನ್ನು ಹಿಡಿದರು.


ಸ್ವಲ್ಪ ಕಾಲವಾದನಂತರ ಅಬ್ಷಾಲೋಮನು ತನಗೋಸ್ಕರ ಒಂದು ರಥವನ್ನು, ಕುದುರೆಗಳನ್ನೂ ತೆಗೆದುಕೊಂಡು, ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಪುರುಷರನ್ನು ನೇಮಿಸಿದನು.


ನಿನ್ನ ದಾಸಿಯು ತಂದ ಈ ಕಾಣಿಕೆಯನ್ನು ಸ್ವಾಮಿಯು ತಮ್ಮ ಸೇವಕರಿಗೆ ಸಲ್ಲಿಸಲಿ.


ಕೂಡಲೆ ಒಬ್ಬನು ಅವನಿಗೆ, “ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ” ಎಂದು ತಿಳಿಸಿದನು.


ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪಶುಗಳು ಯಾತಕ್ಕೆ?” ಎಂದು ಕೇಳಲು ಯಾಕೋಬನು, “ಸ್ವಾಮಿಯವರ ದಯೆ ನನಗೆ ದೊರಕಬೇಕೆಂದು ನಾನು ತಮಗೆ ಅವುಗಳನ್ನು ಕಳುಹಿಸಿಕೊಟ್ಟೆನು” ಎಂದನು.


ಅಬೀಮೆಲೆಕನು ಅಬ್ರಹಾಮನಿಗೆ “ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು