Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಅವರು ಅಬ್ಷಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರ ಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಸಂಗಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಅಬ್ಷಾಲೋಮನಿಗಾಗಿ ಮಾಳಿಗೆಯ ಮೇಲೆ ಗುಡಾರಹಾಕಿದರು. ಅವನು ಎಲ್ಲ ಇಸ್ರಯೇಲರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ಅಬ್ಷಾಲೋಮನಿಗೋಸ್ಕರ ಮಾಳಿಗೆಯ ಮೇಲೆ ಗುಡಾರಹಾಕಿದರು. ಅವನು ಎಲ್ಲಾ ಇಸ್ರಾಯೇಲ್ಯರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಅವರು ಅಬ್ಷಾಲೋಮನಿಗಾಗಿ ಮನೆಯ ಮಾಳಿಗೆಯ ಮೇಲೆ ಒಂದು ಗುಡಾರವನ್ನು ಹಾಕಿದರು. ಅಬ್ಷಾಲೋಮನು ತನ್ನ ತಂದೆಯ ಪತ್ನಿಯರೊಡನೆ ಮಲಗಿಕೊಂಡನು. ಇಸ್ರೇಲರೆಲ್ಲ ಇದನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹಾಗೆಯೇ ಅವರು ಅಬ್ಷಾಲೋಮನ ಮನೆಯ ಮೇಲೆ ಡೇರೆ ಹಾಕಿದರು. ಅಲ್ಲಿ ಅಬ್ಷಾಲೋಮನು ಸಮಸ್ತ ಇಸ್ರಾಯೇಲರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳ ಸಂಗಡ ಮಲಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:22
11 ತಿಳಿವುಗಳ ಹೋಲಿಕೆ  

ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.


ಅರಸನಾದ ದಾವೀದನು ಯೆರೂಸಲೇಮಿಗೆ ಬಂದ ಮೇಲೆ ತಾನು ಅರಮನೆ ಕಾಯುವುದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾಗಿ ಒಂದು ಮನೆಯಲ್ಲಿಟ್ಟು, ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಸಂಗಮಿಸಲಿಲ್ಲ. ಅವರು ಜೀವದಿಂದಿರುವವರೆಗೂ ವಿಧೆವೆಯರಂತಿದ್ದು ಕಾವಲಲ್ಲಿ ಇರಬೇಕಾಯಿತು.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


“ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.


ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ಇಸ್ರಾಯೇಲರಲ್ಲಿ ಒಬ್ಬನು ಮೋಶೆ ಮತ್ತು ಇಸ್ರಾಯೇಲರ ಸರ್ವಸಮೂಹದವರ ಎದುರಿನಲ್ಲಿಯೇ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಬಂದನು.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು