Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಅರಸನು ಅವನಿಗೆ, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ” ಎಂದು ಹೇಳಲು ಅವನು, “ಅರಸನೇ ನಿನಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ. ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಅರಸನು, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ,” ಎಂದು ಹೇಳಿದನು. ಅವನು, “ಅರಸರೇ, ನಿಮಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ; ನನ್ನ ಒಡೆಯರೇ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಅರಸನು ಅವನಿಗೆ - ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ ಎಂದು ಹೇಳಲು ಅವನು - ಅರಸನೇ, ನಿನಗೆ ಸಾಷ್ಟಾಂಗ ನಮಸ್ಕಾರಮಾಡುತ್ತೇನೆ; ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ರಾಜನು, “ಆದ್ದರಿಂದ ಮೆಫೀಬೋಶೆತನಿಗೆ ಸೇರಿರುವುದೆಲ್ಲವನ್ನೂ ಈಗ ನಾನು ನಿನಗೆ ಕೊಡುತ್ತೇನೆ” ಎಂದು ಹೇಳಿದನು. ಚೀಬನು, “ನಾನು ನಿನಗೆ ಸಾಷ್ಟಾಂಗನಮಸ್ಕಾರ ಮಾಡುತ್ತೇನೆ; ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಅರಸನು ಚೀಬನಿಗೆ, “ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲವೂ ನಿನಗುಂಟಾಯಿತು,” ಎಂದನು. ಅದಕ್ಕೆ ಚೀಬನು, “ಅರಸನಾದ ನನ್ನ ಒಡೆಯನೇ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:4
14 ತಿಳಿವುಗಳ ಹೋಲಿಕೆ  

ಮೊದಲು ವಾದಿಸುವವನು ನ್ಯಾಯವಾದಿ ಎಂದು ತೋರುವನು, ಪ್ರತಿವಾದಿ ಎದ್ದ ಮೇಲೆ ಅವನ ಪರೀಕ್ಷೆ ಆಗುವುದು.


ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.


ತಿಳಿವಳಿಕೆಯಿಲ್ಲದೆ ಕೋರುವುದು ಯುಕ್ತವಲ್ಲ, ದುಡುಕುವ ಕಾಲು ದಾರಿತಪ್ಪುವುದು.


ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ರುಜುವಾತಾಗುವುದಕ್ಕೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳು ಬೇಕು.


ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.


ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು.


ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು, “ಅರಸನೇ ರಕ್ಷಿಸು” ಎಂದು ಕೂಗಿದಳು.


ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು ಮೆಫೀಬೋಶೆತನೇ ಅನ್ನಲು ಅವನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ” ಎಂದನು.


ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು ಅವನಿಗೆ, “ನಿನ್ನ ಯಜಮಾನನಾದ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿದ್ದೇನೆ.


ಅರಸನು ತಿರುಗಿ ಅವನನ್ನು, “ನಿನ್ನ ಯಜಮಾನನ ಮಗನು ಎಲ್ಲಿದ್ದಾನೆ?” ಎಂದು ಕೇಳಲು ಅವನು, “ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲರು ಮರಳಿ ತನಗೇ ಕೊಡುವರೆಂದು ಹೇಳಿ ಅವನು ಯೆರೂಸಲೇಮಿನಲ್ಲೇ ಉಳಿದನು” ಅಂದನು


ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ, ಗೇರನ ಮಗನೂ ಆದ ಶಿಮ್ಮೀಯು ದಾವೀದನನ್ನು ಶಪಿಸುತ್ತಾ, ಆ ಊರಿನಿಂದ ಹೊರಗೆ ಬಂದನು.


ಅವನು ಹಾಗೆ ಮಾಡದೆ ನನ್ನ ಒಡೆಯನಾದ ಅರಸನ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದನು. ಅರಸನು ದೇವದೂತನ ಹಾಗಿರುತ್ತಾನೆ. ತನಗೆ ಸರಿಕಂಡದ್ದನ್ನು ಮಾಡಲಿ.


ಆಗ ಅರಸನು, “ನೀನು ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು