Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ಅವರನ್ನು ಶಪಿಸುತ್ತಾ, “ಹೋಗು ಕೊಲೆಗಾರನೆ, ನೀಚನೆ ಹೋಗು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಲ್ಲದೆ, ಅವನು ದಾವೀದನನ್ನು ಶಪಿಸುತ್ತಾ, “ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಬಳಿಸಿಕೊಂಡು, ಅವನ ಮನೆಯವರನ್ನು ಕೊಂದದ್ದಕ್ಕಾಗಿ ಸರ್ವೇಶ್ವರ ನಿನಗೆ ಮುಯ್ಯಿ ತೀರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಶಪಿಸುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಶಿಮ್ಮಿಯು ದಾವೀದನನ್ನು ಶಪಿಸುತ್ತಾ “ತೊಲಗಿಹೋಗು! ನೀನು ಕೊಲೆಗಾರ! ನೀನು ದುಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಶಿಮ್ಮಿಯು ಅರಸನನ್ನು ದೂಷಿಸುತ್ತಾ, “ಕೊಲೆಗಾರನೇ, ನೀಚನೇ, ಹೊರಟು ಹೋಗು; ಹೊರಟು ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:7
16 ತಿಳಿವುಗಳ ಹೋಲಿಕೆ  

ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.


ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.


ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ.


ನೇರನ ಮಗನಾದ ಅಬ್ನೇರನ ಕೊಲೆಯಲ್ಲಿ ಅರಸನು ಕೈಹಾಕಲಿಲ್ಲವೆಂಬುದು ಅವನ ಎಲ್ಲಾ ಜನರಿಗೂ ಇಸ್ರಾಯೇಲರಿಗೂ ಅದೇ ದಿನ ಗೊತ್ತಾಯಿತು.


ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.


ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಅಲ್ಲಿ ವಾಸವಾಗಿರುವ ಇಸ್ರಾಯೇಲರಲ್ಲಿ ಕೆಲವು ಜನ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ತೋರಿಸಿ, “ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ,


ಅವನು ದಾವೀದನಿಗೂ, ಅವನ ಎಲ್ಲಾ ಸೇವಕರಿಗೂ, ಎಡಬಲದಲ್ಲಿರುವ ಸೈನಿಕರಿಗೂ ಮತ್ತು ಶೂರರಿಗೂ ಕಲ್ಲೆಸೆಯ ತೊಡಗಿದನು.


ಚೆರೂಯಳ ಮಗನಾದ ಅಬೀಷೈಯು, “ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ” ಎಂದನು.


ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.


ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, ಹೊಯ್ದಾಡುತ್ತಾ ನರಳುತ್ತಿದ್ದೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.


ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಸೆಲಾ


ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು