Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ, ಇಬ್ಬನಿಯು ನೆಲದ ಮೇಲೆ ಹೇಗೊ, ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಮತ್ತು ಅವನ ಜನರೂ ನಮ್ಮ ಕೈಗೆ ಸಿಕ್ಕುವರು. ಒಬ್ಬನೂ ತಪ್ಪಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ ನೆಲದ ಮೇಲೆ ಇಬ್ಬನಿ ಹೇಗೋ ಹಾಗೆಯೇ ಅವರ ಮೇಲೆ ಎರಗೋಣ. ಆಗ ಅವನೂ ಅವನ ಜನರೂ ನಮ್ಮ ಕೈಗೆ ಸಿಕ್ಕುವರು; ಒಬ್ಬನೂ ತಪ್ಪಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ ಇಬ್ಬನಿಯು ನೆಲದ ಮೇಲೆ ಹೇಗೋ ಹಾಗೆಯೇ ನಾವು ಅವರ ಮೇಲೆ ಬೀಳೋಣ. ಆಗ ಅವನೂ ಅವನ ಜನರೂ ನಮ್ಮ ಕೈಗೆ ಸಿಕ್ಕುವರು; ಒಬ್ಬನೂ ತಪ್ಪಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದಾವೀದನನ್ನು ಅವನು ಅಡಗಿಕೊಂಡಿರುವ ಸ್ಥಳದಲ್ಲಿಯೇ ನಾವು ಹಿಡಿದುಕೊಳ್ಳುತ್ತೇವೆ. ಮಂಜಿನ ಹನಿಗಳು ಭೂಮಿಯ ಮೇಲೆ ಬೀಳುವಂತೆ ನಾವು ದಾವೀದನ ಮೇಲೆ ಬೀಳುವೆವು. ದಾವೀದನನ್ನು ಮತ್ತು ಅವನ ಜನರೆಲ್ಲರನ್ನು ನಾವು ಕೊಲ್ಲುವೆವು. ಯಾರನ್ನೂ ಜೀವಸಹಿತ ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ನಾವು ಅವನನ್ನು ಕಂಡುಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು, ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ, ಅವನ ಸಂಗಡ ಇರುವ ಸಮಸ್ತ ಜನರಲ್ಲಿ ಒಬ್ಬನಾದರೂ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:12
8 ತಿಳಿವುಗಳ ಹೋಲಿಕೆ  

ಉನ್ನತ ಸ್ಥಾನದಲ್ಲಿ ಬಂಡೆಯ ಬಿರುಕುಗಳೊಳಗೆ ವಾಸಿಸುತ್ತಾ, ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು? ಎಂದುಕೊಳ್ಳುವ ಜನರೇ, ನಿಮ್ಮ ಹೃದಯದ ಒಣ ಹೆಮ್ಮೆಯು ನಿಮ್ಮನ್ನು ಮೋಸಗೊಳಿಸಿದೆ.


ನಾನು ಅನ್ಯದೇಶದಲ್ಲಿ ಬಾವಿಗಳನ್ನು ಅಗೆದು ನೀರು ತೆಗೆದು ಕುಡಿದಿದ್ದೇನೆ! ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ನದಿಗಳನ್ನು ಬತ್ತಿಸಿದ್ದೇನೆ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದೀಯಲ್ಲವೇ?”


ನನ್ನ ಒಡೆಯನಾದ ಅಶ್ಶೂರದ ಅರಸನೊಂದಿಗೆ ಸವಾಲು ಮಾಡಿನೋಡು. ಆಗ ಕುದುರೆ ಸವಾರರನ್ನು ಬಳಸಲು ನಿನಗೆ ಸಾಮರ್ಥ್ಯವಿದ್ದರೆ ಆತನು ಎರಡು ಸಾವಿರ ಕುದುರೆಗಳನ್ನು ಕೊಡುತ್ತಾನೆ.


ಆಗ ಅವನು ಅಹಾಬನಿಗೆ, “ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದನು.


ಆದುದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ಸರಿಯಾದ ವರ್ತಮಾನವನ್ನು ನನಗೆ ತಲುಪಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ದೇಶದಲ್ಲಿರುವುದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾಗಲಿ ಹುಡುಕಿ ಅವನನ್ನು ಕಂಡುಹಿಡಿಯುವೆನು” ಅಂದನು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು