2 ಸಮುಯೇಲ 17:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೋನಾತಾನ ಮತ್ತು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಯೋನಾತಾನ್ ಹಾಗು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿ ಎಲ್ಲಾ ವರ್ತಮಾನಗಳನ್ನು ಇವರಿಗೂ ಇವರ ಅರಸ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಗೆ ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೋನಾತಾನ್ ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಇವರು ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತು ಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಗೆ ಬರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯಾಜಕರ ಮಕ್ಕಳಾದ ಯೋನಾತಾನನು ಮತ್ತು ಅಹೀಮಾಚನು ಎನ್-ರೋಗೆಲಿನ ಬುಗ್ಗೆಯ ಹತ್ತಿರ ಕಾದಿದ್ದರು. ತಾವು ನಗರದೊಳಕ್ಕೆ ಹೋಗುವುದನ್ನು ಯಾರೂ ನೋಡಬಾರದೆಂದು ಅವರು ಅಲ್ಲಿ ಅಡಗಿಕೊಂಡಿದ್ದರು. ಆದ್ದರಿಂದ ಕೆಲಸದ ಹುಡುಗಿಯೊಬ್ಬಳು ಹೊರಗೆ ಬಂದು ಅವರಿಗೆ ಆ ಸಂದೇಶವನ್ನು ತಿಳಿಸಿದಳು. ಬಳಿಕ ಯೋನಾತಾನನು ಮತ್ತು ಅಹೀಮಾಚನು ದಾವೀದ ರಾಜನ ಬಳಿಗೆ ಹೋಗಿ ಅದನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೋನಾತಾನನೂ, ಅಹೀಮಾಚನೂ ಏನ್ ರೋಗೆಲ್ ಎಂಬಲ್ಲಿ ಇದ್ದರು. ಒಬ್ಬ ಸೇವಕಿ ಹೋಗಿ ಅವರಿಗೆ ತಿಳಿಸಬೇಕಾಗಿತ್ತು. ಅನಂತರ ಅವರು ಹೋಗಿ ಅರಸನಾದ ದಾವೀದನಿಗೆ ಹೇಳಬೇಕಾಗಿತ್ತು. ಏಕೆಂದರೆ ಪಟ್ಟಣದಲ್ಲಿ ಪ್ರವೇಶಿಸುವುದನ್ನು ಬೇರೆಯವರು ನೋಡುವ ಗಂಡಾಂತರಕ್ಕೆ ಒಳಗಾಗಲು ಅಪೇಕ್ಷಿಸಿರಲಿಲ್ಲ. ಅಧ್ಯಾಯವನ್ನು ನೋಡಿ |