2 ಸಮುಯೇಲ 17:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, “ಅವರು ಹಳ್ಳ ದಾಟಿ ಹೋಗಿಬಿಟ್ಟರು” ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ್ ಮತ್ತು ಯೋನಾತಾನರೆಲ್ಲಿ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆ, ” ಅವರು ಹಳ್ಳದಾಟಿ ಹೋಗಿಬಿಟ್ಟರು,” ಎಂದು ಉತ್ತರಕೊಟ್ಟಳು. ಸೇವಕರು ಅವರನ್ನು ಹುಡುಕುವುದಕ್ಕೆ ಹೋಗಿ ಕಾಣದೆ ಜೆರುಸಲೇಮಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಬ್ಷಾಲೋಮನ ಸೇವಕರು ಸ್ತ್ರೀಯ ಮನೆಗೆ ಹೋಗಿ - ಅಹೀಮಾಚ್ ಯೋನಾತಾನರೆಲ್ಲಿ ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು - ಅವರು ಹಳ್ಳದಾಟಿ ಹೋಗಿ ಬಿಟ್ಟರು ಎಂದು ಉತ್ತರ ಕೊಟ್ಟಳು. ಅವರು ಅವರನ್ನು ಹುಡುಕುವದಕ್ಕೆ ಹೋಗಿ ಕಾಣದೆ ಯೆರೂಸಲೇವಿುಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅಬ್ಷಾಲೋಮನ ಸೇವಕರು ಆ ಮನೆಯಲ್ಲಿದ್ದ ಹೆಂಗಸಿನ ಬಳಿಗೆ ಬಂದು, “ಅಹೀಮಾಚ್ ಮತ್ತು ಯೋನಾತಾನರು ಎಲ್ಲಿ?” ಎಂದು ಕೇಳಿದರು. ಆ ಸ್ತ್ರೀಯು ಅಬ್ಷಾಲೋಮನ ಸೇವಕರಿಗೆ, “ಅವರು ಈಗಾಗಲೇ ಹಳ್ಳವನ್ನು ದಾಟಿಹೋಗಿರಬೇಕು” ಎಂದಳು. ಆಗ ಅಬ್ಷಾಲೋಮನ ಸೇವಕರು ಯೋನಾತಾನ್ ಮತ್ತು ಅಹೀಮಾಚರನ್ನು ಹುಡುಕಲು ಹೋದರು. ಆದರೆ ಅವರು ಸೇವಕರಿಗೆ ಸಿಗಲಿಲ್ಲ. ಆದ್ದರಿಂದ ಅಬ್ಷಾಲೋಮನ ಸೇವಕರು ಜೆರುಸಲೇಮಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು, “ಅಹೀಮಾಚನೂ, ಯೋನಾತಾನನೂ ಎಲ್ಲಿ,” ಎಂದು ಕೇಳಿದರು. ಅವಳು ಅವರಿಗೆ, “ಹಳ್ಳವನ್ನು ದಾಟಿಹೋದರು,” ಎಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿ |