2 ಸಮುಯೇಲ 17:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರು ಹೋದ ಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋದರು. ಅವರು ದಾವೀದನಿಗೆ, “ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ. ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವರು ಹೋದಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, “ಅಹೀತೋಫೆಲನು ನಿಮಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ; ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರು ಹೋದಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ - ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ; ಆದದರಿಂದ ಬೇಗನೆ ಎದ್ದು ಹೊಳೆದಾಟಿ ಹೋಗು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅಬ್ಷಾಲೋಮನ ಸೈನಿಕರು ಹೋದ ಮೇಲೆ ಯೋನಾತಾನ್ ಮತ್ತು ಅಹೀಮಾಚರು ಬಾವಿಯಿಂದ ಮೇಲಕ್ಕೆ ಬಂದರು. ಅವರು ಅರಸನಾದ ದಾವೀದನ ಬಳಿಗೆ ಹೋಗಿ, “ಬೇಗ, ನದಿಯನ್ನು ದಾಟಿಹೋಗು. ಅಹೀತೋಫೆಲನು ನಿನ್ನ ವಿರುದ್ಧವಾಗಿ ಈ ಸಂಗತಿಗಳನ್ನು ಹೇಳಿದ್ದಾನೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇವರು ಹೋದ ತರುವಾಯ, ಅವರು ಬಾವಿಯೊಳಗಿಂದ ಏರಿಹೋಗಿ, ಅರಸನಾದ ದಾವೀದನಿಗೆ, “ನೀನು ಶೀಘ್ರವಾಗಿ ಎದ್ದು ನದಿಯನ್ನು ದಾಟಿ ಹೋಗು; ಏಕೆಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧವಾಗಿ ಆಲೋಚನೆ ಹೇಳಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿ |