2 ಸಮುಯೇಲ 17:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದು ಕತ್ತೆಗೆ ತಡಿಹಾಕಿಸಿ ಕೂತುಕೊಂಡು ತನ್ನ ಊರಿಗೆ ಹೋಗಿ ಮನೆಯಲ್ಲಿ ವ್ಯವಸ್ಥೆಮಾಡಿ ಉರ್ಲುಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿ |