Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅರಸನೊಬ್ಬನನ್ನೇ ಕೊಂದು ಎಲ್ಲಾ ಜನರನ್ನು ತಿರುಗಿ ನಿಮ್ಮ ಬಳಿಗೆ ಬರಮಾಡುವೆನು. ನಿಮ್ಮ ಅಪೇಕ್ಷೆಯಂತೆ ಎಲ್ಲಾ ಜನರೂ ಹಿಂದಿರುಗಿ ಬಂದ ಮೇಲೆ ನಾಡಿನಲ್ಲಿ ಎಲ್ಲಾ ಸಮಾಧಾನವುಂಟಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅರಸನೊಬ್ಬನನ್ನೇ ಕೊಂದು ಎಲ್ಲಾ ಜನರನ್ನು ತಿರಿಗಿ ನಿನ್ನ ಬಳಿಗೆ ಬರಮಾಡುವೆನು. ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರೂ ಹಿಂದಿರುಗಿ ಬಂದ ಮೇಲೆ ದೇಶದಲ್ಲೆಲ್ಲಾ ಸಮಾಧಾನವುಂಟಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅನಂತರ ನಾನು ಜನರೆಲ್ಲರನ್ನೂ ಹಿಂದಕ್ಕೆ ನಿನ್ನ ಬಳಿಗೆ ಕರೆತರುತ್ತೇನೆ. ದಾವೀದನು ಸತ್ತರೆ, ಜನರೆಲ್ಲರೂ ಸಮಾಧಾನದಿಂದ ಹಿಂದಕ್ಕೆ ಬರುತ್ತಾರೆ” ಎಂದು ಅಬ್ಷಾಲೋಮನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ನಾನು ಅರಸನನ್ನು ಮಾತ್ರ ಹೊಡೆದು, ಜನರೆಲ್ಲರನ್ನು ತಿರುಗಿ ನಿನ್ನ ಬಳಿಗೆ ತೆಗೆದುಕೊಂಡು ಬರುವೆನು. ನೀನು ಹುಡುಕುವವನು ಸಿಕ್ಕಿದರೆ, ಜನರೆಲ್ಲರು ಹಿಂದಿರುಗಿದ ಹಾಗೆ ಆಗುವುದು. ಜನರೆಲ್ಲರು ಸಮಾಧಾನವಾಗಿರುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:3
6 ತಿಳಿವುಗಳ ಹೋಲಿಕೆ  

“ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು” ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು.


“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ನನ್ನ ದೇವರು ನುಡಿಯುತ್ತಾನೆ.


“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.


ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಾಯೇಲರನ್ನೆಲ್ಲಾ ಕೂಡಿಸಿ, ನನ್ನ ಒಡೆಯನಾದ ಅರಸನ ಬಳಿಗೆ ಕರೆದುಕೊಂಡು ಬರುವೆನು. ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು. ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು” ಎಂದು ಹೇಳಲು ದಾವೀದನು ಅವನನ್ನು ಸಮಾಧಾನದಿಂದ ಕಳುಹಿಸಿಕೊಟ್ಟನು.


ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.


ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು