Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಸಲಹೆ ಅಬ್ಷಾಲೋಮನಿಗೂ ಇಸ್ರಯೇಲರ ಹಿರಿಯರೆಲ್ಲರಿಗೂ ಸರಿಯಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲ್ಯರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈ ಉಪಾಯವು ಅಬ್ಷಾಲೋಮನಿಗೆ ಮತ್ತು ಇಸ್ರೇಲಿನ ನಾಯಕರಿಗೆಲ್ಲ ಸರಿಯೆಂದು ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈ ಮಾತು ಅಬ್ಷಾಲೋಮನ ದೃಷ್ಟಿಗೂ, ಇಸ್ರಾಯೇಲಿನ ಸಮಸ್ತ ಹಿರಿಯರ ದೃಷ್ಟಿಗೂ ಒಳ್ಳೆಯದಾಗಿ ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:4
8 ತಿಳಿವುಗಳ ಹೋಲಿಕೆ  

ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.


ಅದಕ್ಕೆ ಅವನ ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ, “ಐವತ್ತು ಮೊಳ ಎತ್ತರವಾದ ಒಂದು ಗಲ್ಲುಗಂಬವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡೆದುಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆ ಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು” ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಗಂಬವನ್ನು ಸಿದ್ಧಮಾಡಿಸಿದನು.


ಈ ಮಾತು ಅರಸನಿಗೂ, ಅವನ ಸರದಾರರಿಗೂ ಒಳ್ಳೆಯದೆಂದು ತೋರಿದಾಗ ಅರಸನು ಮೆಮೂಕಾನನ ಮಾತಿನಂತೆಯೇ ಮಾಡಿದನು.


ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದ್ದರಿಂದ


ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರ ತೋರಿಸಿ ಸಹಾಯ ಮಾಡುತ್ತಿರುವುದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.


ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು” ಎಂದು ಹೇಳಿದನು.


ಆಮೇಲೆ ಅಬ್ಷಾಲೋಮನು, “ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನು ಕೇಳೋಣ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು