Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ ನಾನು ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಗೂ ಮತ್ತು ಇತ್ತೈಗೂ, ‘ಜಾಗರೂಕತೆಯಿಂದಿರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದ್ದಾನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಆ ವ್ಯಕ್ತಿ, “ನೀವು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಇಟ್ಟರೂ ಅರಸರ ಮಗನಿಗೆ ವಿರೋಧವಾಗಿ ಕೈಯೆತ್ತೆನು. ಅರಸರು ನಮ್ಮೆಲ್ಲರಿಗೆ ಕೇಳಿಸುವಂತೆ ನಿಮಗೆ, ಅಬೀಷೈಗೆ ಹಾಗು ಇತ್ತೈಗೆ, ‘ಜಾಗರೂಕತೆಯಿಂದಿರಿ! ಆ ಯುವಕ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ಆ ಮನುಷ್ಯನು - ನೀನು ನನ್ನ ಕೈಯಲ್ಲಿ ಸಾವಿರ ರೂಪಾಯಿಗಳನ್ನಿಟ್ಟರೂ ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತೆನು. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ ಅಬೀಷೈಗೂ ಇತ್ತೈಗೂ - ಜಾಗರೂಕತೆಯಿಂದಿರ್ರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು ಎಂದು ಆಜ್ಞಾಪಿಸಿದನಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಮನುಷ್ಯನು ಯೋವಾಬನಿಗೆ, “ನೀನು ಒಂದು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದರೂ ನಾನು ರಾಜನ ಮಗನನ್ನು ಕೊಲ್ಲಲು ಪ್ರಯತ್ನಿಸುತ್ತಿರಲಿಲ್ಲ. ಏಕೆಂದರೆ ನಿನಗೆ, ಅಬೀಷೈಯನಿಗೆ ಮತ್ತು ಇತ್ತೈಯನಿಗೆ ರಾಜನು ನೀಡಿದ್ದ ಆಜ್ಞೆಯನ್ನು ನಾವು ಕೇಳಿದ್ದೇವೆ. ‘ಎಚ್ಚರದಿಂದಿರಿ, ಯುವಕನಾದ ಅಬ್ಷಾಲೋಮನಿಗೆ ಕೇಡುಮಾಡದಿರಿ’ ಎಂದು ರಾಜನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ, ನಾನು ಅರಸನ ಮಗನ ಮೇಲೆ ನನ್ನ ಕೈಚಾಚುವುದಿಲ್ಲ. ಏಕೆಂದರೆ, ‘ಅಬ್ಷಾಲೋಮನೆಂಬ ಯುವಕನೊಡನೆ ಸೌಮ್ಯದಿಂದ ನಡೆದು ಕಾಪಾಡಿರಿ,’ ಎಂದು ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಯನಿಗೂ, ಇತ್ತೈಗೂ ಸ್ಪಷ್ಟವಾಗಿ ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:12
3 ತಿಳಿವುಗಳ ಹೋಲಿಕೆ  

ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು.


ಯೋವಾಬನು ಅವನಿಗೆ, “ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ತಲಾಂತು ಬೆಳ್ಳಿಯನ್ನು, ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು” ಎಂದನು.


ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು