2 ಸಮುಯೇಲ 18:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನು ನಿಮ್ಮೊಂದಿಗೆ ಬರುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು ಸೈನ್ಯವನ್ನು ಮೂರು ಪಂಗಡಗಳಾಗಿ ವಿಭಾಗಿಸಿ ಒಂದು ಪಂಗಡವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನೂ ನಿಮ್ಮ ಸಂಗಡ ಬರುತ್ತೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ - ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದಾವೀದನು ತನ್ನ ಜನರನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಅವರನ್ನು ಹೊರಗೆ ಕಳುಹಿಸಿದನು. ಯೋವಾಬನು ಮೊದಲನೆ ಗುಂಪನ್ನು, ಅಬೀಷೈ ಎರಡನೆ ಗುಂಪನ್ನು, ಗತ್‌ನ ಇತ್ತೈಯನು ಮೂರನೆ ಗುಂಪನ್ನು ನಡೆಸಿದರು. ರಾಜನಾದ ದಾವೀದನು, “ನಾನೂ ನಿಮ್ಮ ಜೊತೆಯಲ್ಲಿ ಬರುತ್ತೇನೆ” ಎಂದು ಅವರಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದಾವೀದನು ಜನರಲ್ಲಿ ಮೂರನೆಯ ಪಾಲನ್ನು ಯೋವಾಬನಿಗೂ, ಎರಡನೆಯ ಪಾಲನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆಗಿರುವ ಅಬೀಷೈಗೂ, ಮೂರನೆಯ ಪಾಲನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿದನು. ತರುವಾಯ ಅರಸನು ಸೈನಿಕರಿಗೆ, “ನಾನೂ ನಿಮ್ಮ ಸಂಗಡ ಹೊರಟು ಬರುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |