Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ದಾವೀದನು ಎರಡು ಬಾಗಿಲುಗಳ ಮಧ್ಯೆ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರನು ಗೋಪುರದ ಮಾಳಿಗೆಯನ್ನು ಹತ್ತಿ ಪಾಗಾರದ ಬಳಿಯಲ್ಲಿ ನಿಂತು ನೋಡಲು ಒಂಟಿಗನಾಗಿ ಬರುವ ಒಬ್ಬ ವ್ಯಕ್ತಿಯನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ದಾವೀದನು ಎರಡು ಬಾಗಲುಗಳ ಮಧ್ಯದಲ್ಲಿ ಕೂತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರನು ಗೋಪುರದ ಮಾಳಿಗೆಯನ್ನು ಹತ್ತಿ ಪಾಗಾರದ ಬಳಿಯಲ್ಲಿ ನಿಂತು ನೋಡಲು ಒಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದಾವೀದನು ನಗರದ ಎರಡು ಬಾಗಿಲುಗಳ ನಡುವೆ ಕುಳಿತಿದ್ದನು. ಕಾವಲುಗಾರನು ಊರಬಾಗಿಲುಗಳ ಮಾಳಿಗೆಯ ಮೇಲಕ್ಕೆ ಹೋದನು. ಕಾವಲುಗಾರನು ದೃಷ್ಟಿಸಿ ನೋಡಿದಾಗ, ಒಬ್ಬ ಮನುಷ್ಯನು ಒಬ್ಬಂಟಿಗನಾಗಿ ಓಡಿಬರುತ್ತಿರುವುದನ್ನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ, ಕಣ್ಣುಗಳನ್ನೆತ್ತಿ ನೋಡಲಾಗಿ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿಬರುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:24
10 ತಿಳಿವುಗಳ ಹೋಲಿಕೆ  

ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು.


ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.


ಅಬ್ಷಾಲೋಮನು ತಪ್ಪಿಸಿಕೊಂಡು ಓಡಿಹೋದನು. ಅಷ್ಟರಲ್ಲಿ ದಾರಿನೋಡುತ್ತಿದ್ದ ಕಾವಲುಗಾರನು, ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವುದನ್ನು ಕಂಡನು.


ನಡೆದದ್ದನ್ನು ತಿಳಿಸಲಾಗಿ ಜನರೆಲ್ಲಾ ಗೋಳಾಡತೊಡಗಿದರು. ದೇವರ ಮಂಜೂಷವೇನಾಯಿತೋ ಎಂಬ ಚಿಂತೆಯಿಂದ ಮಂದಿರದ್ವಾರದ ಬಳಿಯಲ್ಲಿ ಆಸೀನನಾಗಿ ದಾರಿಯನ್ನು ನೋಡುತ್ತಿದ್ದ ಏಲಿಯು ಆ ದುಃಖದ ಧ್ವನಿಯನ್ನು ಕೇಳಿ


ಆಗ ಅಹೀಮಾಚನು ಪುನಃ “ಚಿಂತೆಯಿಲ್ಲ ನನ್ನನ್ನು ಕಳುಹಿಸು” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು “ಹೋಗು” ಎಂದು ಹೇಳಿದನು. ಆಗ ಅಹೀಮಾಚನು ಯೊರ್ದನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು.


ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು” ಎಂದನು. ಆ ಮನುಷ್ಯನು ಬರಬರುತ್ತಾ ಸಮೀಪವಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು