Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಷ್ಟರಲ್ಲಿ ಕಾವಲುಗಾರರು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಬ್ಬಂಟಿಗನಾಗಿ ಬರುತ್ತಿದ್ದಾನೆ” ಎಂದು ಅರಸನಿಗೆ ತಿಳಿಸಿದನು. ಆಗ ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಷ್ಟರಲ್ಲಿ ಕಾವಲುಗಾರನು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಂಟಿಗನಾಗಿ ಬರುತ್ತಿದ್ಪಾನೆ,” ಎಂದು ಅರಸನಿಗೆ ತಿಳಿಸಿದನು. ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಷ್ಟರಲ್ಲಿ ಕಾವಲುಗಾರನು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ - ಇಗೋ, ಇನ್ನೊಬ್ಬನು ಒಂಟಿಗನಾಗಿ ಬರುತ್ತಿದ್ದಾನೆ ಎಂದು ಅರಸನಿಗೆ ತಿಳಿಸಿದನು. ಅರಸನು - ಹಾಗಾದರೆ ಅವನೂ ಸಮಾಚಾರ ತರುವವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅವನ ಹಿಂದೆ ಇನ್ನೊಬ್ಬ ಮನುಷ್ಯನು ಓಡಿಬರುತ್ತಿರುವುದನ್ನು ಕಾವಲುಗಾರನು ನೋಡಿದನು. ಕಾವಲುಗಾರನು ದ್ವಾರಪಾಲಕನನ್ನು ಕರೆದು, “ನೋಡು! ಇನ್ನೊಬ್ಬ ಮನುಷ್ಯನು ಒಬ್ಬಂಟಿಗನಾಗಿ ಓಡುತ್ತಾ ಬರುತ್ತಿದ್ದಾನೆ” ಎಂದನು. ರಾಜನು, “ಅವನು ಸಹ ಸುದ್ದಿಯನ್ನು ತರುತ್ತಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಕಾವಲುಗಾರನು ಬೇರೊಬ್ಬನು ಓಡಿಬರುವುದನ್ನು ಕಂಡು, ಬಾಗಿಲು ಕಾಯುವವನನ್ನು ಕರೆದು, “ಇಗೋ, ಮತ್ತೊಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ,” ಎಂದನು. ಅದಕ್ಕೆ ಅರಸನು, “ಅವನೂ ಸಹ ಒಳ್ಳೆಯ ಸಮಾಚಾರ ತೆಗೆದುಕೊಂಡು ಬರುತ್ತಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:26
3 ತಿಳಿವುಗಳ ಹೋಲಿಕೆ  

ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು” ಎಂದನು. ಆ ಮನುಷ್ಯನು ಬರಬರುತ್ತಾ ಸಮೀಪವಾದನು.


ಆಗ ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಶುಭವರ್ತಮಾನ ತರುವವನು” ಎಂದನು.


ಊರಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು