2 ಸಮುಯೇಲ 18:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅಷ್ಟರಲ್ಲಿ ಕೂಷ್ಯನು ಬಂದು, “ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ. ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅಷ್ಟರಲ್ಲಿ ಕೂಷ್ಯನೂ ಬಂದು, “ನನ್ನ ಒಡೆಯರಾದ ಅರಸರಿಗೆ ಶುಭವರ್ತಮಾನ ತಂದಿದ್ದೇನೆ; ಸರ್ವೇಶ್ವರಸ್ವಾಮಿ ನಿಮಗೆ ವಿರುದ್ಧ ಬಂಡೆದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅಷ್ಟರಲ್ಲಿ ಕೂಷ್ಯನೂ ಬಂದು - ನನ್ನ ಒಡೆಯನಾದ ಅರಸನಿಗೆ ಶುಭವರ್ತಮಾನ ತಂದಿದ್ದೇನೆ; ಯೆಹೋವನು ನಿನಗೆ ವಿರೋಧವಾಗಿ ಎದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಇಥಿಯೋಪ್ಯದವನು ಬಂದನು. ಅವನು, “ನನ್ನ ರಾಜನಾದ ಪ್ರಭುವಿಗೆ ಸುದ್ದಿಯಿದೆ, ನಿನ್ನ ವಿರುದ್ಧವಾಗಿದ್ದ ಜನರನ್ನು ಇಂದು ಯೆಹೋವನು ದಂಡಿಸಿದನು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಕೂಷ್ಯನು, “ಅರಸನಾದ ನನ್ನ ಒಡೆಯನಿಗೆ ಶುಭವರ್ತಮಾನ ಉಂಟು, ಏನೆಂದರೆ ಯೆಹೋವ ದೇವರು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು, ಸಮಸ್ತರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |
ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!