Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಲು ಅವನು, “ನನ್ನ ಒಡೆಯನಾದ ಅರಸನ ಶತ್ರುಗಳಿಗೂ, ಅವನಿಗೆ ಕೇಡು ಮಾಡುವುದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅರಸನು ಅವನನ್ನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೆಯೋ?’ ಎಂದು ಕೇಳಿದನು. ಅವನು, “ನನ್ನ ಒಡೆಯರಾದ ಅರಸರ ಶತ್ರುಗಳಿಗೂ, ಅವರಿಗೆ ಕೇಡು ಮಾಡುವುದಕ್ಕೆ ನಿಂತವರೆಲ್ಲರಿಗೂ ಆ ಯುವಕನಿಗಾದ ಗತಿಯೇ ಆಗಲಿ!” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅರಸನು ಅವನನ್ನು - ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ ಎಂದು ಕೇಳಲು ಅವನು - ನನ್ನ ಒಡೆಯನಾದ ಅರಸನ ಶತ್ರುಗಳಿಗೂ ಅವನಿಗೆ ಕೇಡು ಮಾಡುವದಕ್ಕೆ ಎದ್ದು ನಿಂತವರೆಲ್ಲರಿಗೂ ಆ ಯೌವನಸ್ಥನಿಗಾದ ಗತಿಯೇ ಆಗಲಿ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ರಾಜನು ಅವನಿಗೆ, “ಯುವಕನಾದ ಅಬ್ಷಾಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಇಥಿಯೋಪ್ಯದವನು, “ನಿನ್ನ ಶತ್ರುಗಳು ಮತ್ತು ನಿನಗೆ ಕೇಡುಮಾಡಲು ನಿನಗೆ ವಿರುದ್ಧವಾಗಿ ಬಂದ ಜನರೆಲ್ಲರು ಈ ಯುವಕನಂತೆಯೇ ದಂಡಿಸಲ್ಪಡುವರು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅರಸನು ಕೂಷ್ಯನಿಗೆ, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದನು. ಕೂಷ್ಯನು ಉತ್ತರವಾಗಿ, “ಅರಸನಾದ ನನ್ನ ಒಡೆಯನ ಶತ್ರುಗಳು ಕೇಡು ಮಾಡುವಂತೆ ನಿನಗೆ ವಿರೋಧವಾಗಿ ಏಳುವ ಸಮಸ್ತರಿಗೂ, ಆ ಯುವಕನಿಗಾದ ಹಾಗೆಯೇ ಆಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:32
8 ತಿಳಿವುಗಳ ಹೋಲಿಕೆ  

ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.


ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನಾಣೆ, ನಿನ್ನ ಜೀವದಾಣೆ ನಿನ್ನ ವಿರೋಧಿಗಳೂ, ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.


ಆಗ ಬೇಲ್ತೆಶಚ್ಚರನೆಂಬ ಅಡ್ಡಹೆಸರಿನ ದಾನಿಯೇಲನು ತನ್ನ ಬುದ್ಧಿಗೆ ತೋರಿದ್ದನ್ನು ಕಂಡು ಭಯಪಟ್ಟು ಸ್ವಲ್ಪ ಸಮಯ ಸ್ತಬ್ಧನಾದನು. ರಾಜನು ಇದನ್ನು ನೋಡಿ, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ” ಎಂದು ಹೇಳಲು ಬೇಲ್ತೆಶಚ್ಚರನು, “ನನ್ನ ಒಡೆಯನೇ, ಆ ಕನಸು ನಿನ್ನ ಶತ್ರುಗಳಿಗೆ ಫಲಿಸಲಿ, ಅದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ!


ಆಗ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ” ಎಂದು ಉತ್ತರಕೊಟ್ಟನು.


ಯೋವಾಬನು ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು” ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟುಹೋದನು.


ನನ್ನನ್ನು ಎದುರಿಸಿ ಕೀಳುಮಾತನಾಡುವವರಿಗೆ ಯೆಹೋವನಿಂದ ಬರುವ ಪ್ರತಿಫಲವು ಇದೇ ಆಗಿರಲಿ.


ಅದಕ್ಕೆ ಮನುಷ್ಯನ ಹೃದಯವು ಹೋಗಿ ಮೃಗದ ಹೃದಯವು ಬರಲಿ; ಹೀಗೆ ಅದಕ್ಕೆ ಏಳು ವರ್ಷ ಕಳೆಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು