2 ಸಮುಯೇಲ 18:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಇದನ್ನು ಕೇಳಿ ಅರಸನು ಎದೆಯೊಡದವನಾಗಿ, “ನನ್ನ ಮಗನೇ, ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅಬ್ಷಾಲೋಮನೇ! ನನ್ನ ಮಗನೇ, ನನ್ನ ಮಗನೇ!” ಎಂದು ಕೂಗಿ ಅಳುತ್ತಾ ಪಟ್ಟಣದ ಹೆಬ್ಬಾಗಿಲಿನ ಮೇಲಿರುವ ಕೋಣೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇದನ್ನು ಕೇಳಿದ್ದೇ ಅರಸನ ಎದೆಯೊಡೆಯಿತು. ಅವನು, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು! ಅಬ್ಷಾಲೋಮನೇ, ನನ್ನ ಮಗನೇ ಮಗನೇ,” ಎಂದು ಕೂಗಿ ಗೋಳಿಡುತ್ತಾ ಹೆಬ್ಬಾಗಿಲಿನ ಮೇಲಿದ್ದ ಕೋಣೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಇದನ್ನು ಕೇಳಿ ಅರಸನು ಎದೆಯೊಡೆದವನಾಗಿ - ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ಮಗನೇ ಎಂದು ಕೂಗಿ ಅಳುತ್ತಾ ಹೆಬ್ಬಾಗಲಿನ ಮೇಲಿರುವ ಕೋಣೆಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆಗ ಅರಸನು ನಡುಗುತ್ತಾ ಊರು ಬಾಗಿಲ ಮೇಲಿರುವ ಕೊಠಡಿಗೆ ಏರಿಹೋದನು. ಹೋಗುವಾಗ, “ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ,” ಎಂದು ಹೇಳಿ ಅತ್ತನು. ಅಧ್ಯಾಯವನ್ನು ನೋಡಿ |