2 ಸಮುಯೇಲ 18:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅರಸನು ಯೋವಾಬ, ಅಬೀಷೈ ಮತ್ತು ಇತ್ತೈ ಎಂಬುವರಿಗೆ, “ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನಿಗೆ ದಯೆ ತೋರಿಸಿರಿ” ಎಂದು ಆಜ್ಞಾಪಿಸಿದನು. ದಾವೀದನು ಸೇನಾಧಿಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅರಸನು ಯೋವಾಬ್, ಅಬೀಷೈ ಹಾಗು ಇತ್ತೈ ಎಂಬವರಿಗೆ, “ನನ್ನ ಸಲುವಾಗಿ ಯುವಕ ಅಬ್ಷಾಲೋಮನಿಗೆ ಹಾನಿಮಾಡಬೇಡಿ,” ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆ ಸೈನ್ಯದವರಿಗೆಲ್ಲಾ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅರಸನು ಯೋವಾಬ್ ಅಬೀಷೈ ಇತ್ತೈ ಎಂಬವರಿಗೆ - ನನಗೋಸ್ಕರವಾಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರುಣಿಸಿರಿ ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆಯು ಸೈನ್ಯದವರಿಗೆಲ್ಲಾ ಕೇಳಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ರಾಜನು ಯೋವಾಬನಿಗೆ, ಅಬೀಷೈಯನಿಗೆ ಮತ್ತು ಇತ್ತೈಯನಿಗೆ, “ನೀವು ನನಗೋಸ್ಕರವಾಗಿ ಯುವಕನಾದ ಅಬ್ಷಾಲೋಮನಿಗೆ ಕರುಣೆ ತೋರಿಸಿ!” ಎಂದು ಆಜ್ಞಾಪಿಸಿದನು. ಅಬ್ಷಾಲೋಮನ ಬಗ್ಗೆ ತನ್ನ ಸೇನಾಪತಿಗಳಿಗೆ ರಾಜನು ನೀಡಿದ ಆಜ್ಞೆಯು ಜನರೆಲ್ಲರಿಗೂ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅರಸನು ಯೋವಾಬನಿಗೂ, ಅಬೀಷೈಯಿಗೂ, ಇತ್ತೈಗೂ ಆಜ್ಞಾಪಿಸಿ, “ನನಗೋಸ್ಕರ ಯುವಕನಾದ ಅಬ್ಷಾಲೋಮನೊಂದಿಗೆ ಮೃದುವಾಗಿ ವರ್ತಿಸಿರಿ,” ಎಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಟ ಆಜ್ಞೆಯನ್ನು ಸೈನಿಕರೆಲ್ಲರೂ ಕೇಳಿದರು. ಅಧ್ಯಾಯವನ್ನು ನೋಡಿ |