Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಪರಾಭವಗೊಂಡರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿವಸ ಇಪ್ಪತ್ತುಸಾವಿರ ಜನರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದಾವೀದನ ಸೈನ್ಯವು ಇಸ್ರೇಲರನ್ನು ಸೋಲಿಸಿತು. ಅಂದು ಇಪ್ಪತ್ತು ಸಾವಿರ ಜನರು ಕೊಲ್ಲಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಲ್ಲಿ ಇಸ್ರಾಯೇಲರು ದಾವೀದನ ಸೇವಕರ ಮುಂದೆ ಸಂಹಾರವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:7
12 ತಿಳಿವುಗಳ ಹೋಲಿಕೆ  

ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.


ರೆಮಲ್ಯನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು.


ಅರಸನ ಬಳಿಗೆ ವ್ಯಾಜ್ಯಕ್ಕಾಗಿ ಬರುವ ಎಲ್ಲಾ ಇಸ್ರಾಯೇಲರಿಗೂ ಅಬ್ಷಾಲೋಮನು ಹೀಗೆಯೇ ಮಾಡಿ, ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿಕೊಂಡನು.


ಆದರೆ ದಾವೀದನ ಸೈನಿಕರು ಅಬ್ನೇರನ ಜನರಾಗಿರುವ ಬೆನ್ಯಾಮೀನ್ಯರಲ್ಲಿ ಮುನ್ನೂರ ಅರವತ್ತು ಮಂದಿಯನ್ನು ಕೊಂದಿದ್ದರು.


ಆಗ ಅಬ್ನೇರನು, “ಯೋವಾಬನನ್ನು ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ” ಎಂದನು.


ಅನಂತರ ಆ ದಿನ ಘೋರ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು.


ಅನಂತರ ಸೈನಿಕರು ಇಸ್ರಾಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಾಯೀಮಿನ ಕಾಡಿನಲ್ಲಿ ಯುದ್ಧವಾಯಿತು.


ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.


ಅರಸುಗಳಿಗೆ ಜಯಪ್ರದನೂ, ಸೇವಕನಾದ ದಾವೀದನನ್ನು ಹಾನಿಕರವಾದ ಕತ್ತಿಗೆ ತಪ್ಪಿಸಿದವನೂ ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು