Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಹೇಗೆಂದರೆ ಅವನು ಹತ್ತಿದ ಹೆಸರುಗತ್ತೆಯು ಒಂದು ದೊಡ್ಡ ದೇವದಾರು (ಕರ್ಪೂರತೈಲದ) ಮರದ ಕೆಳಗೆ ಹಾದುಹೋಗುವಾಗ ಅವನ ತಲೆಯ ಕೂದಲು ಒಂದು ದೊಡ್ಡದಾದ ಕೊಂಬೆಗೆ ಸಿಕ್ಕಿಕೊಂಡಿತು. ಹೇಸರಗತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಅದು ಹೇಗೆಂದರೆ, ಅವನು ಹತ್ತಿದ್ದ ಹೇಸರಗತ್ತೆ ಒಂದು ದೊಡ್ಡ ಓಕ್ ಮರದ ಕೆಳಗೆ ಹಾದುಹೋಗುವಾಗ ಅವನ ತಲೆ ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಆ ಹೇಸರಗತ್ತೆ ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯೆ ನೇತಾಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಬ್ಷಾಲೋಮನು ದಾವೀದನ ಸೇವಕರಿಗೆ ಸಿಕ್ಕಿದನು; ಹೇಗಂದರೆ - ಅವನು ಹತ್ತಿದ ಹೇಸರಕತ್ತೆಯು ಒಂದು ದೊಡ್ಡ ಏಲಾಮರದ ಕೆಳಗೆ ಹಾದುಹೋಗುವಾಗ ಅವನ ತಲೆಯು ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಹೇಸರಕತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂವಿುಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಬ್ಷಾಲೋಮನು ದಾವೀದನ ಸೈನಿಕರ ಕೈಗೆ ಸಿಕ್ಕಿಕೊಂಡನು. ಅವನು ಹೇಸರಕತ್ತೆಯ ಮೇಲೆ ಸವಾರಿ ಮಾಡುತ್ತಾ ತಪ್ಪಿಸಿಕೊಳ್ಳಲು ಹೋದನು. ಆ ಹೇಸರಕತ್ತೆಯು ದೊಡ್ಡ ಓಕ್ ಮರದ ರೆಂಬೆಗಳ ಕೆಳಗೆ ಓಡುತ್ತಾ ಹೋಯಿತು. ಆ ರೆಂಬೆಗಳು ದಟ್ಟವಾಗಿದ್ದುದರಿಂದ ಅಬ್ಷಾಲೋಮನ ತಲೆಯು ಮರದಲ್ಲಿ ಸಿಕ್ಕಿಹಾಕಿಕೊಂಡಿತು. ಅವನು ಕುಳಿತುಕೊಂಡಿದ್ದ ಹೇಸರಕತ್ತೆಯು ಓಡಿಹೋದುದರಿಂದ ಅಬ್ಷಾಲೋಮನು ಮರದಲ್ಲಿ ನೇತಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:9
18 ತಿಳಿವುಗಳ ಹೋಲಿಕೆ  

ಅವನ ತಲೆಯ ಕೂದಲು ಬಹು ಭಾರವಾದ್ದರಿಂದ ಪ್ರತಿ ವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ಕೂದಲು ರಾಜರ ತೂಕದ ಪ್ರಕಾರ ಇನ್ನೂರು ರೂಪಾಯಿ ತೂಕವಾಗುತ್ತಿತ್ತು.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


ಆತನು ಅನ್ಯಾಯಗಾರರಿಗೆ ವಿಪತ್ತನ್ನೂ, ಕೆಡುಕರಿಗೆ ಉಪದ್ರವವನ್ನೂ ಕೊಡುತ್ತಾನಲ್ಲವೆ?


ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.


‘ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು ‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.


ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.”


ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.


ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


“ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


“ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.


ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.


ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.


ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.


ಇದನ್ನು ನೋಡಿದ ಒಬ್ಬ ಮನುಷ್ಯನು ಯೋವಾಬನಿಗೆ, “ಅಗೋ, ಆ ದೇವದಾರು ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು