2 ಸಮುಯೇಲ 19:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ, ನೀವು ನನಗೆ ಯಾಕೆ ಶತ್ರುಗಳಾಗಬೇಕು? ಈ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವುದು ಸರಿಯೋ? ನಾನು ಇಸ್ರಾಯೇಲರ ಅರಸನೆಂಬುದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು” ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈ ದಿನ ನನ್ನನ್ನು ಆ ಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿನದಲ್ಲಿ ಇಸ್ರಯೇಲರಲ್ಲಿ ಒಬ್ಬನಿಗೆ ಮರಣದಂಡನೆ ಆಗುವುದು ಸರಿಯೇ? ನಾನು ಇಸ್ರಯೇಲರ ಅರಸನೆಂಬುವುದು ಈ ದಿನ ಸ್ಪಷ್ಟವಾಗಿ ಗೊತ್ತಾಯಿತು,” ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅದಕ್ಕೆ ದಾವೀದನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈಹೊತ್ತು ನನ್ನನ್ನು ಅಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿವಸದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವದು ಸರಿಯೋ? ನಾನು ಇಸ್ರಾಯೇಲ್ಯರ ಅರಸನೆಂಬದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು ಎಂದು ನುಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದಾವೀದನು, “ಚೆರೂಯಳ ಮಕ್ಕಳೇ, ನಾನು ನಿಮಗೆ ಏನು ಮಾಡಲಿ? ನೀವಿಂದು ನನಗೆ ವಿರುದ್ಧರಾಗಿರುವಿರಿ. ವಿಶೇಷವಾದ ಈ ದಿನದಲ್ಲಿ ಒಬ್ಬ ಇಸ್ರೇಲನನ್ನು ಸಾವಿಗೆ ಗುರಿಮಾಡುವುದು ಸರಿಯಾಗಿರುವುದೇ? ಇಸ್ರೇಲಿನಲ್ಲಿ ಈ ದಿನ ನಾನು ಇಸ್ರೇಲಿಗೆಲ್ಲ ರಾಜನೆಂಬುದು ನನಗೆ ತಿಳಿದಿದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ದಾವೀದನು, “ಚೆರೂಯಳ ಮಕ್ಕಳೇ, ಈ ಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈ ಹೊತ್ತು ಇಸ್ರಾಯೇಲಿನಲ್ಲಿ ಯಾರಿಗೂ ಮರಣದಂಡನೆ ಆಗಬಾರದು, ಏಕೆಂದರೆ ಈ ಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ಗೊತ್ತಾಯಿತಲ್ಲಾ?” ಎಂದನು. ಅಧ್ಯಾಯವನ್ನು ನೋಡಿ |