Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅನಂತರ ಅರಸನು ಶಿಮ್ಮಿಗೆ, “ನಿನಗೆ ಮರಣದಂಡನೆ ಆಗುವುದಿಲ್ಲ” ಎಂದು ಪ್ರಮಾಣಮಾಡಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅನಂತರ ಅರಸನು ಶಿಮ್ಮಿಗೆ, “ನಿನಗೆ ಮರಣಶಿಕ್ಷೆಯಾಗುವುದಿಲ್ಲ,” ಎಂದು ಪ್ರಮಾಣಮಾಡಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅನಂತರ ಅರಸನು ಶಿಮ್ಮಿಗೆ - ನಿನಗೆ ಮರಣ ಶಿಕ್ಷೆಯಾಗುವದಿಲ್ಲ ಎಂದು ಪ್ರಮಾಣಮಾಡಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಂತರ ರಾಜನು ಶಿಮ್ಮಿಗೆ, “ನಿನ್ನನ್ನು ಕೊಲ್ಲುವುದಿಲ್ಲ” ಎಂದು ವಾಗ್ದಾನ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಅರಸನು ಶಿಮ್ಮಿಗೆ, “ನೀನು ಸಾಯುವುದಿಲ್ಲ,” ಎಂದು ಅವನಿಗೆ ಆಣೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:23
9 ತಿಳಿವುಗಳ ಹೋಲಿಕೆ  

ಯೆಹೋಯಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.


ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು” ಎಂದು ಹೇಳಿದನು.


ಮನುಷ್ಯರು ತಮಗಿಂತಲೂ ಹೆಚ್ಚಿನವನ ಮೇಲೆ ಆಣೆಯಿಡುತ್ತಾರಷ್ಟೆ, ಆಣೆಯನ್ನು ದೃಢಪಡಿಸಿದ ಮೇಲೆ ವಿವಾದವು ಅಂತ್ಯವಾಗುವುದು.


ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯೋ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು” ಅಂದನು.


ಅದಕ್ಕೆ ಸೌಲನು, “ಯೆಹೋವನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ” ಎಂದು ಆಕೆಗೆ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದನು.


ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುಗುವ ವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.


ಸೌಲನು ಅವರಿಗೆ, “ಯೆಹೋವನು ಈ ದಿನ ಇಸ್ರಾಯೇಲ್ಯರಿಗೆ ಜಯವನ್ನು ಉಂಟುಮಾಡಿರುವುದರಿಂದ ಯಾರನ್ನೂ ಕೊಲ್ಲಬಾರದು” ಎಂದು ಹೇಳಿದನು.


ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು