Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜನರು ಆ ದಿನ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನದಿಂದ ಊರನ್ನು ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಜನರು ಆ ದಿನದ ಯುದ್ಧದಲ್ಲಿ ಸೋತು ಓಡಿಬಂದಿರುವವರೋ ಎಂಬಂತೆ, ನಾಚಿಕೆಯಿಂದ ಕಳ್ಳತನವಾಗಿ ಊರನ್ನು ಹೊಕ್ಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜನರು ಆ ದಿವಸ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನವಾಗಿ ಊರನ್ನು ಹೊಕ್ಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರು ನಾಚಿಕೆಯಿಂದ ನಗರದೊಳಕ್ಕೆ ಸದ್ದಿಲ್ಲದೆ ಬಂದರು. ಅವರು ಯುದ್ಧದಲ್ಲಿ ಸೋತುಬಂದವರಂತೆ ಕಾಣುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಜನರು ಯುದ್ಧದಲ್ಲಿ ಓಡಿಹೋಗಿ ಅವಮಾನ ಪಟ್ಟು ಬರುವ ಕಳ್ಳರ ಹಾಗೆ ಪಟ್ಟಣದೊಳಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:3
5 ತಿಳಿವುಗಳ ಹೋಲಿಕೆ  

ಇವನು ಎಂಬತ್ತು ವರ್ಷದ ಮುದುಕನು. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಕಾಲದಲ್ಲೆಲ್ಲಾ ಅವನ ಜೀವನಕ್ಕೆ ಬೇಕಾದದ್ದನ್ನು ಇವನೇ ಒದಗಿಸಿಕೊಡುತ್ತಿದ್ದನು.


ದಾವೀದನು ಮಹನಯಿಮಿಗೆ ಹೋದನು. ಅಬ್ಷಾಲೋಮನು ಮತ್ತು ಇಸ್ರಾಯೇಲರೆಲ್ಲರೂ ಕೂಡಿಕೊಂಡು ಯೊರ್ದನ್ ನದಿಯನ್ನು ದಾಟಿದರು.


ಯಾಕೆ ನನ್ನನ್ನು ಮೋಸಗೊಳಿಸಿ ಕಳ್ಳತನದಿಂದ ಹೊರಟು ಬಂದಿ? ನನಗೆ ತಿಳಿಸಿದ್ದರೆ ನಾನು ಸಂತೋಷದಿಂದ ಹಾಡು, ವೀಣೆ, ತಾಳ ಮುಂತಾದ ವಾದ್ಯಗಳೊಡನೆ ನಿನ್ನನ್ನು ಕಳುಹಿಸುತ್ತಿದ್ದೆನು.


ಅರಸನು ಮಗನಿಗೊಸ್ಕರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು.


ಅರಸನು ತನ್ನ ಮುಖವನ್ನು ಮುಚ್ಚಿಕೊಂಡು, “ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ!” ಎಂದು ಬಹಳವಾಗಿ ಗೋಳಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು