Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನದಿ ದಾಟಿ ಸ್ವಲ್ಪ ದೂರಕ್ಕೆ ನಿಮ್ಮ ಸಂಗಡ ಬರುತ್ತೇನೆ. ಅರಸರಾದ ನೀವು ನನಗೇಕೆ ಇಂಥ ಉಪಕಾರ ಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಹೊಳೆದಾಟಿ ಸ್ವಲ್ಪದೂರಕ್ಕೆ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನೀನು ನನಗೆ ಕೊಡಬೇಕೆಂದಿರುವ ಯಾವ ವಸ್ತುಗಳೂ ನನಗೆ ಬೇಕಿಲ್ಲ. ನಾನು ನಿನ್ನೊಂದಿಗೆ ಜೋರ್ಡನ್ ನದಿಯನ್ನು ದಾಟುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವವರೆಗೂ ಅವರ ಅರಸನ ಸಂಗಡ ಬರುವನು. ಅದಕ್ಕೆ ಇಂಥಾ ಬಹುಮಾನ ಕೊಡುವುದೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:36
5 ತಿಳಿವುಗಳ ಹೋಲಿಕೆ  

ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.


ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು?


ದಯವಿಟ್ಟು ನಿನ್ನ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ. ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ ಇಲ್ಲಿ ನಿನ್ನ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯನಾದ ಅರಸನು ಇವನನ್ನು ಕರೆದುಕೊಂಡು ಹೋಗಿ ತನ್ನ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಲಿ” ಎಂದನು.


ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.


ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು