Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಜನರೆಲ್ಲರು ನದಿ ದಾಟಿದರು. ಅರಸನು ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಮರಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಎಲ್ಲಾ ಜನರೂ ಹೊಳೆದಾಟಿದರು. ಅರಸನು ಹೊಳೆದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ರಾಜನು ಬರ್ಜಿಲ್ಲೈಯನಿಗೆ ಮುದ್ದಿಟ್ಟು ಆಶೀರ್ವದಿಸಿದನು. ಬರ್ಜಿಲ್ಲೈಯನು ಮನೆಗೆ ಹಿಂದಿರುಗಿದನು. ರಾಜನು ತನ್ನ ಜನರೆಲ್ಲರೊಂದಿಗೆ ನದಿಯನ್ನು ದಾಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಜನರೆಲ್ಲರೂ ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ, ಬರ್ಜಿಲ್ಲೈಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಸ್ಥಳಕ್ಕೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:39
18 ತಿಳಿವುಗಳ ಹೋಲಿಕೆ  

ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು.


ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು.


ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರೆದುಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು, ಯಾಕೋಬನು ಫರೋಹನನ್ನು ಆಶೀರ್ವದಿಸಿದನು.


ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನೂ ವಂದಿಸಿರಿ.


ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.


ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;


ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.


ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೇಕಳುಹಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಅರಸನು ಅವನನ್ನು ಮುದ್ದಿಟ್ಟನು.


ಅರಸನು ಅವನಿಗೆ, “ಮಗನೇ ಬೇಡ ನಾವೆಲ್ಲರೂ ಬಂದರೆ ನಿನಗೆ ಭಾರವಾದೀತು” ಅನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಹೋಗಲಿಲ್ಲ. ಅವನನ್ನು ಆಶೀರ್ವದಿಸಿದನು ಅಷ್ಟೇ.


ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು.


ಇದಾದ ಮೇಲೆ ಅವನು ಸೇನಾಧೀಶ್ವರನಾದ ಯೆಹೋವನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.


ಅನಂತರ ಸೌಲನು ತನ್ನ ಮನೆಗೆ ಹೊರಟನು. ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು.


ತರುವಾಯ ಬಿಳಾಮನು ಸ್ವದೇಶಕ್ಕೆ ತಿರುಗಿ ಹೋದನು, ಬಾಲಾಕನೂ ಹೊರಟುಹೋದನು.


ಪುನಃ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.


ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ.


ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ;


ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತಿಯೋ ಅದೆಲ್ಲವನ್ನೂ ಮಾಡುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು