2 ಸಮುಯೇಲ 19:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, “ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯೋವಾಬನು ಅರಸನ ಬಳಿಗೆ ಹೋಗಿ, “ನಿಮ್ಮನ್ನೂ ನಿಮ್ಮ ಗಂಡುಹೆಣ್ಣು ಮಕ್ಕಳನ್ನೂ ಹೆಂಡತಿಯರನ್ನೂ ಉಪಪತ್ನಿಯರನ್ನೂ ರಕ್ಷಿಸಿದಂಥ ನಿಮ್ಮ ಸೇವಕರನ್ನು ಈ ದಿನ ಅಪಮಾನಪಡಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ - ನಿನ್ನನ್ನೂ ನಿನ್ನ ಗಂಡುಹೆಣ್ಣು ಮಕ್ಕಳನ್ನೂ ಹೆಂಡತಿಯರನ್ನೂ ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೇವಕರನ್ನು ಈಹೊತ್ತು ಅಪಮಾನಪಡಿಸಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೋವಾಬನು ರಾಜನ ಮನೆಗೆ ಬಂದನು. ಅವನು ರಾಜನಿಗೆ, “ನೀನು ನಿನ್ನ ಎಲ್ಲಾ ಸೈನಿಕರನ್ನು ಅವಮಾನ ಮಾಡುತ್ತಿರುವೆ! ನಿನ್ನ ಸೈನಿಕರು ಇಂದು ನಿನ್ನ ಜೀವವನ್ನು ರಕ್ಷಿಸಿದರು. ಅವರು ನಿನ್ನ ಗಂಡುಮಕ್ಕಳ, ಹೆಣ್ಣುಮಕ್ಕಳ, ಪತ್ನಿಯರ ಮತ್ತು ದಾಸಿಯರ ಜೀವಗಳನ್ನು ರಕ್ಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು, ಅವನಿಗೆ, “ನಿನ್ನ ಪ್ರಾಣವನ್ನೂ, ನಿನ್ನ ಪುತ್ರಪುತ್ರಿಯರ ಪ್ರಾಣಗಳನ್ನೂ, ನಿನ್ನ ಹೆಂಡತಿಯರ ಮತ್ತು ಉಪಪತ್ನಿಯರ ಪ್ರಾಣಗಳನ್ನೂ ರಕ್ಷಿಸಿದ ನಿನ್ನ ಸೇವಕರನ್ನು ಈ ಹೊತ್ತು ನಾಚಿಕೆಪಡಿಸಿದ್ದೀ. ಅಧ್ಯಾಯವನ್ನು ನೋಡಿ |