2 ಸಮುಯೇಲ 19:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈಗ ಎದ್ದು ಹೋಗಿ ನಿಮ್ಮ ಸೇವಕರನ್ನು ದಯಾಭಾವದಿಂದ ಮಾತಾಡಿಸಿ, ನೀವು ಹೀಗೆ ಮಾಡದಿದ್ದರೆ ಸರ್ವೇಶ್ವರನಾಣೆ, ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿಮ್ಮನ್ನು ಬಿಟ್ಟುಹೋಗುವರು. ಯೌವನಕಾಲದಿಂದ ಈವರೆಗೆ ನಿಮಗೆ ಬಂದೊದಗಿದ ಕೇಡುಗಳಲ್ಲಿ ಇದು ದೊಡ್ಡದಾಗುವುದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯಾಭಾವದಿಂದ ಮಾತಾಡಿಸು; ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನಕಾಲದಿಂದ ಈವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಈಗ ಮೇಲೆದ್ದು ನಿನ್ನ ಸೇವಕರೊಂದಿಗೆ ಮಾತನಾಡು; ಅವರನ್ನು ಪ್ರೋತ್ಸಾಹಿಸು. ಯೆಹೋವನಾಣೆ, ಈ ಕಾರ್ಯವನ್ನು ಮಾಡಲು ನೀನಿಂದು ಹೊರಗೆ ಹೋಗದಿದ್ದರೆ, ರಾತ್ರಿಯ ವೇಳೆಗೆ ನಿನ್ನೊಂದಿಗೆ ಯಾವ ಮನುಷ್ಯನೂ ಉಳಿಯುವುದಿಲ್ಲ. ನೀನು ನಿನ್ನ ಚಿಕ್ಕಂದಿನಿಂದ ಈವರೆಗೆ ಅನುಭವಿಸಿದ ಸಂಕಷ್ಟಗಳಲ್ಲೆಲ್ಲ ಇದು ತೀರ ಕೆಟ್ಟದಾಗಿರುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಈಗ ನೀನು ಎದ್ದು ಹೊರಟುಬಂದು, ನಿನ್ನ ಸೈನಿಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ, ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವುದಿಲ್ಲವೆಂದು ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವನಕಾಲದಿಂದ ಈ ದಿನದವರೆಗೂ ನಿನಗೆ ಬಂದ ಸಮಸ್ತ ಕೇಡಿಗಿಂತ ಅದು ಅಧಿಕ ಕೇಡಾಗಿರುವುದು,” ಎಂದನು. ಅಧ್ಯಾಯವನ್ನು ನೋಡಿ |