Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಅರಸನು ಎದ್ದು ಬಂದು ಊರುಬಾಗಿಲಲ್ಲಿ ಕುಳಿತುಕೊಂಡನು. “ಇಗೋ, ಅರಸರು ಊರುಬಾಗಿಲಲ್ಲಿ ಕುಳಿತುಕೊಂಡಿದ್ದಾರೆ,” ಎಂಬ ಸುದ್ದಿ ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಬಂದು ಅವನ ಸುತ್ತಲೂ ನೆರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಅರಸನು ಎದ್ದು ಬಂದು ಊರುಬಾಗಲಲ್ಲಿ ಕೂತುಕೊಂಡನು. ಇಗೋ, ಅರಸನು ಬಂದು ಊರುಬಾಗಲಲ್ಲಿ ಕೂತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ರಾಜನು ನಗರದ ಬಾಗಿಲಿಗೆ ಹೋದನು. ರಾಜನು ಬಾಗಿಲಿನ ಬಳಿಯಲ್ಲಿದ್ದಾನೆಂಬ ಸುದ್ದಿಯು ಹರಡಿತು. ಆದ್ದರಿಂದ ಜನರೆಲ್ಲರೂ ರಾಜನನ್ನು ನೋಡಲು ಬಂದರು. ಅಬ್ಷಾಲೋಮನ ಹಿಂಬಾಲಕರಾದ ಇಸ್ರೇಲರೆಲ್ಲ ಮನೆಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಅರಸನು ಎದ್ದು ಹೋಗಿ ಬಾಗಿಲಲ್ಲಿ ಕುಳಿತನು. “ಅರಸನು ಬಾಗಿಲಲ್ಲಿ ಕುಳಿತಿದ್ದಾನೆ,” ಎಂದು ಸಮಸ್ತ ಸೈನಿಕರಿಗೆ ತಿಳಿದಿದ್ದರಿಂದ, ಸೈನಿಕರೆಲ್ಲರೂ ಅರಸನ ಎದುರಿಗೆ ಬಂದರು. ಆದರೆ ಇಸ್ರಾಯೇಲರು ಮಧ್ಯದಲ್ಲಿ ತಮ್ಮ ತಮ್ಮ ಮನೆಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:8
10 ತಿಳಿವುಗಳ ಹೋಲಿಕೆ  

ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು.


ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.


ಯೆಹೂದ್ಯರು ಇಸ್ರಾಯೇಲರಿಂದ ಸೋಲಿಸಲ್ಪಟ್ಟು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಸೂರ್ಯಸ್ತಮಾನವಾದ ಕೂಡಲೆ “ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ” ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು


ಜನರು ಆ ದಿನ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನದಿಂದ ಊರನ್ನು ಪ್ರವೇಶಿಸಿದರು.


ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನರವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು.


ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಯೊರ್ದನ್ ನದಿಯನ್ನು ದಾಟಿ ಚಾಯೀರಿಮಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲಿ ಎದ್ದು ಅವರನ್ನು ಅವರ ರಥಬಲದ ಅಧಿಪತಿಗಳನ್ನು ಸೋಲಿಸಿ ಪಾರಾದನು. ಅವನ ಸೈನ್ಯದವರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು